ಐಪಿಎಲ್ 2021: ಬೆಂಗಳೂರು vs ರಾಜಸ್ಥಾನ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಮುಂಬೈ : 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಗುರುವಾರ ( ಏಪ್ರಿಲ್ 22 ) ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ಪಂದ್ಯಗಳನ್ನಾಡಿದ್ದು ಮೂರರಲ್ಲಿಯೂ ಸಹ ಜಯವನ್ನು ಗಳಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಕೂಡ 3 ಪಂದ್ಯಗಳನ್ನಾಡಿದ್ದು ಒಂದರಲ್ಲಿ ಜಯ ಗಳಿಸಿ ಎರಡು ಪಂದ್ಯಗಳಲ್ಲಿ ಸೋತಿದೆ.

ಐಪಿಎಲ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇದುವರೆಗೂ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎರಡೂ ತಂಡಗಳು ಸಹ ಸಮಬಲವನ್ನು ಸಾಧಿಸಿವೆ. 23 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಲ್ಲಿ ಜಯ ಗಳಿಸಿದೆ ಹಾಗೂ 3 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ದೊರಕಿಲ್ಲ.

ಬೆಂಗಳೂರು - ರಾಜಸ್ಥಾನ್ ಮುಖಾಮುಖಿಯ ಕೊನೆಯ ಐದು ಪಂದ್ಯಗಳ ಫಲಿತಾಂಶ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾ ಮುಖಿಯಾಗಿರುವ ಕಳೆದ 5 ಪಂದ್ಯಗಳ ಪೈಕಿ ಎರಡು ಪಂದ್ಯಗಳಲ್ಲಿ ಬೆಂಗಳೂರು ತಂಡ ಜಯಗಳಿಸಿದೆ, ರಾಜಸ್ಥಾನ್ ರಾಯಲ್ಸ್ ಕೂಡ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ ಹಾಗೂ ಒಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ಸಿಕ್ಕಿಲ್ಲ.

ಕಳೆದ ಆವೃತ್ತಿಯ ಫಲಿತಾಂಶ

2020ರ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಲೀಗ್ ಹಂತದಲ್ಲಿ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ಪಂದ್ಯಗಳಲ್ಲೂ ಸಹ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಸಾಧಿಸಿದೆ.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿದವರು : ಎಬಿ ಡಿವಿಲಿಯರ್ಸ್ 484 ರನ್, ವಿರಾಟ್ ಕೊಹ್ಲಿ 482 ರನ್ ಹಾಗೂ ಅಜಿಂಕ್ಯ ರಹಾನೆ 347 ರನ್.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ವಿಕೆಟ್ ಪಡೆದವರು : ಯುಜ್ವೇಂದ್ರ ಚಹಾಲ್ 16 ವಿಕೆಟ್ಸ್, ಶ್ರೇಯಸ್ ಗೋಪಾಲ್ 14 ವಿಕೆಟ್ಸ್ ಹಾಗೂ ಅನಿಲ್ ಕುಂಬ್ಳೆ 9 ವಿಕೆಟ್ಸ್.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್‌ಗಳು : ದೇವದತ್ ಪಡಿಕ್ಕಲ್ 473 ರನ್ಸ್, ವಿರಾಟ್ ಕೊಹ್ಲಿ 466 ರನ್ಸ್ ಮತ್ತು ಎಬಿ ಡಿವಿಲಿಯರ್ಸ್ 454 ರನ್ಸ್.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್‌ಗಳು : ಯುಜ್ವೇಂದ್ರ ಚಹಾಲ್ 21 ವಿಕೆಟ್ಸ್, ಜೋಫ್ರಾ ಆರ್ಚರ್ 20 ವಿಕೆಟ್ಸ್ ಹಾಗೂ ಕ್ರಿಸ್ ಮೊರಿಸ್ 11 ವಿಕೆಟ್ಸ್.

For Quick Alerts
ALLOW NOTIFICATIONS
For Daily Alerts
Story first published: Thursday, April 22, 2021, 14:00 [IST]
Other articles published on Apr 22, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X