ಐಪಿಎಲ್ 2021: ಪಂಜಾಬ್‌ಗೆ 132 ರನ್‌ಗಳ ಸಾಧಾರಣ ಸವಾಲು ನೀಡಿದ ಮುಂಬೈ

ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಕದನದಲ್ಲಿ ಕೆಎಲ್ ರಾಹುಲ್ ಬಳಗ ಬೌಲಿಂಗ್ ವಿಭಾಗದಲ್ಲಿ ಯಶಸ್ಸು ಸಾಧಿಸಿದೆ. ಟಾಸ್ ಗೆದ್ದು ಮೊದಲು ಮುಂಬೈ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದ ಪಂಜಾಬ್ ಮುಂಬೈ ತಂಡವನ್ನು 131 ರನ್‌ಗಳಿಗೆ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.
ಬ್ಯಾಟಿಂಗ್‌ಗೆ ಸವಾಲಾಗಿರುವ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ಬೌಲರ್‌ಗಳು ಪಿಚ್‌ನ ಲಾಭವನ್ನು ಸಮರ್ಥವಾಗಿ ಬಳಸಿಕೊಂಡರು. ಮುಂಬೈನ ಬ್ಯಾಟ್ಸ್‌ಮನ್‌ಗಳು ವೇಗವಾಗಿ ರನ್‌ಗಳಿಸುವಲ್ಲಿ ಸಂಪೂರ್ಣವಾಗಿ ವಿಫಲರಾದರು. ನಾಯಕ ರೋಹಿತ್ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್ ಮಾತ್ರವೇ ಉತ್ತಮ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾದರು.
ಮುಂಬೈ ನಾಯಕ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ 63 ರನ್‌ಗಳ ಕೊಡುಗೆಯನ್ನು ನೀಡಿದರು. ಈ ಪ್ರದರ್ಶನ ಮುಂಬೈ ಪಾಳಿಗೆ ಅತ್ಯಂತ ನಿರ್ಣಾಯಕವೆನಿಸಿತು. ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾಗೆ ಉತ್ತಮ ಸಾಥ್ ನೀಡಿ ತಂಡದ ಮೊತ್ತವನ್ನು ಹಿಗ್ಗಿಸಲು ಕಾರಣರಾದರು.
ಉಳಿದಂತೆ ಕ್ವಿಂಟನ್ ಡಿಕಾಕ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕಿರಾನ್ ಪೊಲಾರ್ಡ್, ಕೃನಾಲ್ ಪಾಂಡ್ಯ ಈ ಪಂದ್ಯದಲ್ಲೂ ತಮ್ಮ ವೈಫಲ್ಯವನ್ನು ಮುಂದುವರಿಸಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 130/6 ರನ್‌ಗಳಿಸಲಷ್ಟೇ ಶಕ್ತವಾಯಿತು.
ಇನ್ನು ಇಂದಿನ ಪಂದ್ಯದಲ್ಲಿ ಅವಕಾಶವನ್ನು ಪಡೆದ ಯುವ ಸ್ಪಿನ್ನರ್ ರವಿ ಬಿಶ್ನೋಯ್ ಉತ್ತಮ ಬೌಲಿಂಗ್ ಪ್ರದರ್ಶಿಸಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ ಕೂಡ 2 ವಿಕೆಟ್ ಕೀಳುವಲ್ಲಿ ಸಫಲರಾದರು. ಉಳಿದಂತೆ ದೀಪಕ್ ಹೂಡ ಹಾಗೂ ಅರ್ಷದೀಪ್ ಸಿಂಗ್ ತಲಾ ಒಂದು ವಿಕೆಟ್ ಪಡೆದುಕೊಂಡರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications