
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಬಾರಿಯ ಆವೃತ್ತಿಯ 17 ಪಂದ್ಯ ಇದಾಗಿದ್ದು ಎರಡು ತಂಡಗಳು ಕೂಡ ಗೆಲುವಿನ ನಿರೀಕ್ಷೆಯಲ್ಲಿದೆ. ಹಾಲಿ ಚಾಂಪಿಯನ್ನರ ಸವಾಲನ್ನು ಕೆಎಲ್ ರಾಹುಲ್ ಬಳಗ ಯಾವ ರೀತಿಯಲ್ಲಿ ಎದುರಿಸಲಿದೆ ಎಂಬುದು ಸಾಕಷ್ಟು ಕುತೂಹಲ ಮೂಡಿಸಿದೆ.
ಈ ಎರಡು ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಸಣ್ಣ ಮೇಲುಗೈ ಸಾಧಿಸಿದ್ದು 14 ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಪಂಜಾಬ್ ಕಿಂಗ್ಸ್ 12 ಗೆಲುವು ಪಡೆದುಕೊಂಡಿದೆ.
ಕಳೆದ ಐದು ಪಂದ್ಯಗಳ ಫಲಿತಾಂಶವು ಕೂಡ ಇದೇ ರೀತಿಯಾಗಿದ್ದು ಮುಂಬೈ ಇಂಡಿಯನ್ಸ್ ಸಣ್ಣ ಮುನ್ನಡೆ ಪಡೆದುಕೊಂಡಿದೆ. ಮುಂಬೈ ಮೂರು ಪಂದ್ಯಗಳಲ್ಲಿ ಗೆದ್ದುಕೊಂಡಿದ್ದರೆ ಪಂಜಾಬ್ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿತ್ತು.
ಇನ್ನು ಈ ಎರಡು ತಂಡಗಳ ಮುಖಾಮುಖಿಯ ಸಂದರ್ಭದಲ್ಲಿ ಪಂಜಾಬ್ ತಂಡದ ಪರವಾಗಿ 2008-2017ರ ವರೆಗೆ ಆಡಿದ್ದ ಶಾನ್ ಮಾರ್ಶ್ 526 ರನ್‌ಗಳಿಸಿ ಅತಿ ಹೆಚ್ಚಿನ ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಕಿರಾನ್ ಪೊಲಾರ್ಡ್ ಇದ್ದು 498 ರನ್‌ಗಳಿಸಿದ್ದಾರೆ.
ಇನ್ನು ಬೌಲರ್‌ಗಳ ಪಕಿ ಈ ಎರಡು ತಂಡಗಳು ಮುಖಾಮುಖಿಯಾಗಿದ್ದ ವೇಳೆ ಮುಂಬೈ ಇಂಡಿಯನ್ಸ್ ತಂಡದ ಲಸಿತ್ ಮಲಿಂಗ 22 ವಿಕೆಟ್ ಪಡೆದು ಹೆಚ್ಚಿನ ಯಶಸ್ಸು ಸಾಧಿಸಿದ್ದಾರೆ. ಎರಡನೇ ಸ್ಥಾನದಲ್ಲಿ ಜಸ್ಪ್ರೀತ್ ಬೂಮ್ರಾ ಇದ್ದು 17 ವಿಕೆಟ್ ಪಡೆದುಕೊಂಡಿದ್ದಾರೆ.