Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021 : ಕೊಲ್ಕತ್ತಾ vs ರಾಜಸ್ಥಾನ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021, Match 18 : KKR vs RR Head-to-head record, highest run-getters, top wicket-takers

ಮುಂಬೈ : 14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 17ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಶನಿವಾರ ( ಏಪ್ರಿಲ್ 23 ) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿರುವ ತಂಡಗಳ ಸೆಣಸಾಟ ಇದಾಗಿದ್ದು ಎರಡೂ ತಂಡಗಳಿಗೂ ಸಹ ಇಂದಿನ ಪಂದ್ಯ ಬಹುಮುಖ್ಯವಾಗಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಎರಡೂ ತಂಡಗಳು ಸಹ ತಲಾ 4 ಪಂದ್ಯಗಳನ್ನು ಆಡಿದ್ದು ಕೇವಲ ಒಂದು ಪಂದ್ಯದಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತಿವೆ. ಒಟ್ಟಿನಲ್ಲಿ ಇಂದಿನ ಪಂದ್ಯ ಸೋಲುವ ತಂಡಕ್ಕೆ ಅಂಕ ಪಟ್ಟಿಯಲ್ಲಿ ಕಡೆಯ ಸ್ಥಾನ ಕಟ್ಟಿಟ್ಟ ಬುತ್ತಿ.

ಐಪಿಎಲ್ ಇತಿಹಾಸದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇದುವರೆಗೂ 23 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 12 ಪಂದ್ಯಗಳಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 10 ಪಂದ್ಯಗಳಲ್ಲಿ ಜಯ ಗಳಿಸಿದೆ ಮತ್ತು ಒಂದು ಪಂದ್ಯದಲ್ಲಿ ಯಾವುದೇ ಫಲಿತಾಂಶ ದೊರಕಿಲ್ಲ. ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಕೊಲ್ಕತ್ತಾ - ರಾಜಸ್ಥಾನ್ ಮುಖಾಮುಖಿಯ ಕೊನೆಯ 5 ಪಂದ್ಯಗಳ ಫಲಿತಾಂಶ

ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ್ ರಾಯಲ್ಸ್ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಕೊಲ್ಕತ್ತಾ 4 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ರಾಜಸ್ಥಾನ್ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯಗಳಿಸಿದೆ. ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ದೊಡ್ಡ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ

2020ರ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಎರಡೂ ಪಂದ್ಯಗಳಲ್ಲಿಯೂ ಸಹ ಕೋಲ್ಕತ್ತ ನೈಟ್ ರೈಡರ್ಸ್ ತಂಡ ಜಯಗಳಿಸಿ ಮೇಲುಗೈ ಸಾಧಿಸಿದೆ.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿದವರು : ಅಜಿಂಕ್ಯ ರಹಾನೆ 338 ರನ್, ಶೇನ್ ವಾಟ್ಸನ್ 304 ರನ್ ಹಾಗೂ ಗೌತಮ್ ಗಂಭೀರ್ 255 ರನ್.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ವಿಕೆಟ್ ಪಡೆದವರು : ಸುನೀಲ್ ನರೇನ್ 10 ವಿಕೆಟ್, ಸಿದ್ಧಾರ್ಥ್ ತ್ರಿವೇದಿ 9 ವಿಕೆಟ್ ಮತ್ತು ಶಕಿಬ್ ಅಲ್ ಹಸನ್ 9 ವಿಕೆಟ್.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್‌ಗಳು : ಶುಬ್ಮನ್ ಗಿಲ್ 440 ರನ್, ಇಯಾನ್ ಮಾರ್ಗನ್ 418 ರನ್ ಮತ್ತು ಸಂಜು ಸ್ಯಾಮ್ಸನ್ 375 ರನ್

IPL ಗೆ ಗುಡ್ ಬೈ ಹೇಳಿದ T Natarajan | Oneindia Kannada

ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್‌ಗಳು : ಜೋಫ್ರಾ ಅರ್ಚರ್ 20 ವಿಕೆಟ್, ವರುಣ್ ಚಕ್ರವರ್ತಿ 17 ವಿಕೆಟ್ ಮತ್ತು ಪ್ಯಾಟ್ ಕಮಿನ್ಸ್ 12 ವಿಕೆಟ್.

Story first published: Saturday, April 24, 2021, 15:20 [IST]
Other articles published on Apr 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+