Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RR vs KKR Preview: ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, Match 18, RR vs KKR Preview, Mumbai Weather Forecast, Pitch Report, Playing XIs

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 17ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಶನಿವಾರ ( ಏಪ್ರಿಲ್ 23 ) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿರುವ ತಂಡಗಳ ಸೆಣಸಾಟ ಇದಾಗಿದ್ದು ಎರಡೂ ತಂಡಗಳಿಗೂ ಸಹ ಇಂದಿನ ಪಂದ್ಯ ಬಹುಮುಖ್ಯವಾಗಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಎರಡೂ ತಂಡಗಳು ಸಹ ತಲಾ 4 ಪಂದ್ಯಗಳನ್ನು ಆಡಿದ್ದು ಕೇವಲ ಒಂದು ಪಂದ್ಯದಲ್ಲಿ ಗೆದ್ದು, 3 ಪಂದ್ಯಗಳಲ್ಲಿ ಸೋತಿವೆ. ಒಟ್ಟಿನಲ್ಲಿ ಇಂದಿನ ಪಂದ್ಯ ಸೋಲುವ ತಂಡಕ್ಕೆ ಅಂಕ ಪಟ್ಟಿಯಲ್ಲಿ ಕಡೆಯ ಸ್ಥಾನ ಕಟ್ಟಿಟ್ಟ ಬುತ್ತಿ.

ಪಂದ್ಯದ ಆರಂಭ : ಪಂದ್ಯ ಸಂಜೆ 7.30ಕ್ಕೆ ವಾಂಖೆಡೆ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಡಿಮೆ. 30° ಸೆಲ್ಸಿಯಸ್ ಉಷ್ಣಾಂಶವಿರಲಿದ್ದು, 67ರಿಂದ 73% ಆರ್ದ್ರತೆಯ ಜೊತೆಗೆ 96% ಮೋಡ ಕವಿದ ವಾತಾವರಣವಿರಲಿದೆ.

ಪಿಚ್ ರಿಪೋರ್ಟ್

ಮುಂಬೈನ ವಾಂಖೆಡೆ ಸ್ಟೇಡಿಯಂ ಬ್ಯಾಟ್ಸ್‌ಮನ್‌ಗಳಿಗೆ ಬಹಳ ಸಹಕಾರಿಯಾಗಲಿದ್ದು, ಬಾಲ್ ನೇರವಾಗಿ ಬ್ಯಾಟ್ ಗೆ ತಗುಲುವುದರಿಂದ ಹಿಂದಿನ ಪಂದ್ಯಗಳಂತೆ ಈ ಪಂದ್ಯದಲ್ಲಿಯೂ ಹೆಚ್ಚಿನ ರನ್ ಹೊಳೆ ಹರಿಯಲಿದೆ. ವೇಗದ ಬೌಲರ್‌ಗಳಿಗೆ ಮುಂಬೈ ಪಿಚ್ ಸಹಕಾರಿಯಾಗಲಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡ 190ಕ್ಕಿಂತ ಹೆಚ್ಚು ರನ್ ಗಳಿಸಿದರೆ ಮಾತ್ರ ಎದುರಾಳಿಗಳ ಮೇಲೆ ಒತ್ತಡ ಹೇರಲು ಸಾಧ್ಯ.

ರಾಜಸ್ಥಾನ್ ರಾಯಲ್ಸ್ - ಕೊಲ್ಕತ್ತಾ ನೈಟ್ ರೈಡರ್ಸ್ ಫ್ಯಾಂಟಸಿ ತಂಡ

ಜೋಸ್ ಬಟ್ಲರ್ (ನಾಯಕ), ಸಂಜು ಸ್ಯಾಮ್ಸನ್, ನಿತೀಶ್ ರಾಣಾ, ಶುಬ್ಮನ್ ಗಿಲ್, ಡೇವಿಡ್ ಮಿಲ್ಲರ್, ಆ್ಯಂಡ್ರೆ ರಸೆಲ್ (ಉಪ ನಾಯಕ), ಕ್ರಿಸ್ ಮೊರಿಸ್, ಶಿವಮ್ ದುಬೆ, ಪ್ರಸಿದ್ಧ್ ಕೃಷ್ಣ, ಮುಸ್ತಫಿಜರ್ ರೆಹಮಾನ್ ಹಾಗೂ ವರುಣ್ ಚಕ್ರವರ್ತಿ

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ :

ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್ , ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ), ರಿಯಾನ್ ಪರಾಗ್, ಡೇವಿಡ್ ಮಿಲ್ಲರ್, ಶಿವಂ ದುಬೆ, ರಾಹುಲ್ ತೆವಾಟಿಯಾ, ಶಿವಂ ದುಬೆ, ಜಯದೇವ್ ಉನಾದ್ಕತ್/ಶ್ರೇಯಸ್ ಗೋಪಾಲ್, ಮುಸ್ತಫಿಜರ್ ರೆಹಮಾನ್ ಮತ್ತು ಚೇತನ್ ಸಕಾರಿಯಾ.

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ :

IPL ಗೆ ಗುಡ್ ಬೈ ಹೇಳಿದ T Natarajan | Oneindia Kannada

ಶುಬ್ಮನ್ ಗಿಲ್, ನಿತೀಶ್ ರಾಣ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ಸುನೀಲ್ ನರೇನ್, ಆ್ಯಂಡ್ರೆ ರಸೆಲ್, ದಿನೇಶ್ ಕಾರ್ತಿಕ್ (ವಿ.ಕೀ), ಪ್ಯಾಟ್ ಕಮಿನ್ಸ್, ವರುಣ್ ಚಕ್ರವರ್ತಿ, ಕಮಲೇಶ್ ನಾಗರಕೋಟಿ ಮತ್ತು ಪ್ರಸಿದ್ಧ್ ಕೃಷ್ಣ

Story first published: Saturday, April 24, 2021, 13:11 [IST]
Other articles published on Apr 24, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+