For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ vs ಬೆಂಗಳೂರು ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021, Match 19 : CSK vs RCB Head-to-head record, highest run-getters, top wicket-takers

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 19ನೇ ಪಂದ್ಯ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ (ಏಪ್ರಿಲ್ 25) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಎಲ್ಲಾ 4 ಪಂದ್ಯಗಳನ್ನೂ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿ ಮೂರರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋಲುಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಎದುರಿಸಲಿದೆ. ಈ ಪಂದ್ಯವು ಹೈವೋಲ್ಟೇಜ್ ಪಂದ್ಯವಾಗಿರಲಿದ್ದು ಜಯಗಳಿಸುವ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಳ್ಳಲಿದೆ.

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

 ಕಳೆದ ಆವೃತ್ತಿಯ ಫಲಿತಾಂಶ

ಕಳೆದ ಆವೃತ್ತಿಯ ಫಲಿತಾಂಶ

2020ರಲ್ಲಿ ದುಬೈನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಲೀಗ್ ಹಂತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು 2 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ ಎರಡು ಪಂದ್ಯಗಳಲ್ಲಿ ಒಂದು ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವು ಸಾಧಿಸಿತ್ತು, ಮತ್ತೊಂದು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವನ್ನು ಸಾಧಿಸಿತ್ತು.

ಚೆನ್ನೈ - ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಗಳಿಸಿದವರು

ಚೆನ್ನೈ - ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ಅತಿಹೆಚ್ಚು ರನ್ ಗಳಿಸಿದವರು

ಚೆನ್ನೈ ಮತ್ತು ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ವಿರಾಟ್ ಕೊಹ್ಲಿ 901 ರನ್ ಗಳಿಸಿದ್ದರೆ ಉಳಿದಂತೆ ಎಂಎಸ್ ಧೋನಿ 735 ಮತ್ತು ಸುರೇಶ್ ರೈನಾ 669 ರನ್ ಗಳಿಸಿದ್ದಾರೆ.

ಚೆನ್ನೈ ಮತ್ತು ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ಅತಿಹೆಚ್ಚು ವಿಕೆಟ್ ಪಡೆದವರು

ಚೆನ್ನೈ ಮತ್ತು ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ಅತಿಹೆಚ್ಚು ವಿಕೆಟ್ ಪಡೆದವರು

ಚೆನ್ನೈ ಮತ್ತು ಬೆಂಗಳೂರು ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಅಲ್ಬಿ ಮೊರ್ಕೆಲ್. ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಅಲ್ಬಿ ಮೊರ್ಕೆಲ್ 16 ವಿಕೆಟ್‍ಗಳನ್ನು ಪಡೆದುಕೊಂಡಿದ್ದರೆ, ಮುತ್ತಯ್ಯ ಮುರಳೀಧರನ್ 15 ಹಾಗೂ ವಿನಯ್ ಕುಮಾರ್ 15 ವಿಕೆಟ್‍ಗಳನ್ನು ಪಡೆದುಕೊಂಡಿದ್ದಾರೆ.

ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಎರಡೂ ತಂಡಗಳ ಆಟಗಾರರ ಪಟ್ಟಿ

ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಎರಡೂ ತಂಡಗಳ ಆಟಗಾರರ ಪಟ್ಟಿ

ಅತಿ ಹೆಚ್ಚು ರನ್ ಗಳಿಸಿದವರು :

1. ದೇವದತ್ ಪಡಿಕ್ಕಲ್ - 473 ರನ್

2. ವಿರಾಟ್ ಕೊಹ್ಲಿ - 466 ರನ್

3. ಎಬಿ ಡಿವಿಲಿಯರ್ಸ್ - 454 ರನ್

ಅತಿ ಹೆಚ್ಚು ವಿಕೆಟ್ ಪಡೆದವರು :

1. ಯುಜ್ವೇಂದ್ರ ಚಹಾಲ್ - 21 ವಿಕೆಟ್‍ಗಳು

2. ಸ್ಯಾಮ್ ಕರನ್ - 13 ವಿಕೆಟ್‍ಗಳು

3. ದೀಪಕ್ ಚಹರ್ - 12 ವಿಕೆಟ್‍ಗಳು

Story first published: Sunday, April 25, 2021, 10:37 [IST]
Other articles published on Apr 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+