ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಚೆನ್ನೈ vs ಬೆಂಗಳೂರು : ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, Match 19, CSK vs RCB Preview, Mumbai Weather Forecast, Pitch Report, Playing XIs,

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡಿರುವ ಎಲ್ಲಾ 4 ಪಂದ್ಯಗಳಲ್ಲಿಯೂ ಜಯ ಗಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಒಂದರಲ್ಲಿ ಸೋತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾನುವಾರ ( ಏಪ್ರಿಲ್ 25 ) ಎದುರಿಸಲಿದೆ. ಯಶಸ್ಸಿನ ಹಾದಿಯಲ್ಲಿರುವ ಈ ಎರಡೂ ತಂಡಗಳ ಈ ಮುಖಾಮುಖಿಯಲ್ಲಿ ಗೆದ್ದ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳಲಿದೆ.

ಪಂದ್ಯದ ಆರಂಭ : ಪಂದ್ಯ ಮಧ್ಯಾಹ್ನ 3.30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಡುವಿನ ಪಂದ್ಯಕ್ಕೆ ಮಳೆಯ ಅಡ್ಡಿ ಸಾಧ್ಯತೆ ತುಂಬಾ ಕಡಿಮೆ. 33° ಸೆಲ್ಸಿಯಸ್ ಉಷ್ಣಾಂಶವಿರಲಿದೆ ಹಾಗೂ 58ರಿಂದ 69% ಆರ್ದ್ರತೆ ಇರಲಿದೆ. 56% ಮೋಡ ಕವಿದ ವಾತಾವರಣವಿರಲಿದ್ದು ಮಧ್ಯಾಹ್ನದ ಪಂದ್ಯವಾದ್ದರಿಂದ ಇಬ್ಬನಿ ಬೀಳುವುದಿಲ್ಲ.

ಪಿಚ್ ರಿಪೋರ್ಟ್

ಮುಂಬೈನ ವಾಂಖೆಡೆ ಸ್ಟೇಡಿಯಂನ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಈ ಸ್ಟೇಡಿಯಂನಲ್ಲಿ ನಡೆದ ಹಿಂದಿನ ಪಂದ್ಯಗಳಲ್ಲಿಯೂ ರನ್ ಹೊಳೆ ದೊಡ್ಡ ಮಟ್ಟದಲ್ಲಿಯೇ ಹರಿದಿದೆ. ಬೌಲಿಂಗ್ ವಿಚಾರಕ್ಕೆ ಬಂದರೆ ವೇಗಿಗಳಿಗೆ ಈ ಪಿಚ್ ತುಸು ಸಹಕಾರಿ. ಮೊದಲು ಬ್ಯಾಟಿಂಗ್ ಮಾಡುವ ತಂಡ 190ಕ್ಕಿಂತ ಅಧಿಕ ರನ್ ಗಳಿಸಿದರೆ ಮಾತ್ರ ಎದುರಾಳಿಗಳಿಗೆ ಕಠಿಣ ಸ್ಪರ್ಧೆಯನ್ನು ನೀಡಬಹುದು.

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ :

ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂಎಸ್ ಧೋನಿ (ನಾಯಕ/ವಿ.ಕೀ), ಡ್ವೇಯ್ನ್ ಬ್ರಾವೋ, ರವೀಂದ್ರ ಜಡೇಜಾ, ಮೊಯಿನ್ ಅಲಿ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್ ಮತ್ತು ದೀಪಕ್ ಚಹರ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ :

ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿ ವಿಲಿಯರ್ಸ್ (ವಿ.ಕೀ), ಗ್ಲೆನ್ ಮ್ಯಾಕ್ಸ್‌ವೆಲ್, ವಾಷಿಂಗ್ಟನ್ ಸುಂದರ್, ಶಹಬಾಝ್ ಅಹ್ಮದ್, ಕೈಲ್ ಜಾಮಿಸನ್, ಕೇನ್ ರಿಚರ್ಡ್ಸನ್, ಹರ್ಷಲ್ ಪಟೇಲ್, ಯುಜ್ವೇಂದ್ರ ಚಹಲ್ ಮತ್ತು ಮೊಹಮ್ಮದ್ ಸಿರಾಜ್.

Story first published: Sunday, April 25, 2021, 11:31 [IST]
Other articles published on Apr 25, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X