ಐಪಿಎಲ್ 2021 : ಚೆನ್ನೈ vs ಡೆಲ್ಲಿ ಮುಖಾಮುಖಿ ಕಾದಾಟದಲ್ಲಿ ಯಾರದ್ದು ಮೇಲುಗೈ?

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಪಂದ್ಯ ಇಂದು ( ಏಪ್ರಿಲ್ 10 ) ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಹಿಂದಿನ ಆವೃತ್ತಿಗಳಲ್ಲಿ ಈ ಎರಡೂ ತಂಡಗಳು ಚೆನ್ನೈ ಅಥವಾ ಡೆಲ್ಲಿ ಕ್ರೀಡಾಂಗಣಗಳಲ್ಲಿ ಮುಖಾಮುಖಿಯಾಗುತ್ತಿದ್ದವು ಆದರೆ ಇದೇ ಮೊದಲ ಬಾರಿಗೆ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗುತ್ತಿರುವುದು ಭಿನ್ನವಾಗಿರಲಿದೆ.
ಕಳೆದ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು 2 ಬಾರಿ ಮುಖಾಮುಖಿಯಾಗಿದ್ದವು , ಎರಡೂ ಪಂದ್ಯಗಳಲ್ಲಿಯೂ ಸಹ ಡೆಲ್ಲಿ ಕ್ಯಾಪಿಟಲ್ಸ್ ಜಯಗಳಿಸಿತ್ತು.
ಚೆನ್ನೈ ಮೇಲುಗೈ
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಒಟ್ಟಾರೆ ಕಾದಾಟದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸ್ಪಷ್ಟವಾಗಿ ಮೇಲುಗೈ ಸಾಧಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ 8 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿದೆ. ಕಳೆದ ಐಪಿಎಲ್ ಟೂರ್ನಿಯಲ್ಲಿ ಈ ಎರಡೂ ತಂಡಗಳು 2 ಬಾರಿ ಮುಖಾಮುಖಿಯಾಗಿ ಎರಡೂ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಜಯ ಸಾಧಿಸಿತ್ತು.
ಧೋನಿ & ಬ್ರಾವೋ ಯಶಸ್ವಿ ಆಟಗಾರರು
ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯಗಳಲ್ಲಿ ಚೆನ್ನೈ ಪರ ಆಟಗಾರರಾದ ಎಂಎಸ್ ಧೋನಿ ಮತ್ತು ಡಿಜೆ ಬ್ರಾವೊ ಯಶಸ್ವಿ ಆಟಗಾರರಾಗಿದ್ದಾರೆ. ಎಂಎಸ್ ಧೋನಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇದುವರೆಗೂ ಒಟ್ಟು 547 ರನ್‌ಗಳನ್ನು ಬಾರಿಸಿದ್ದು, ಬ್ರಾವೋ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 14 ವಿಕೆಟ್‍ಗಳನ್ನು ಪಡೆದಿದ್ದಾರೆ.
ಡೆಲ್ಲಿ ಪರ ಅಮಿತ್ ಮಿಶ್ರಾ ಮತ್ತು ಶಿಖರ್ ಧವನ್ ಯಶಸ್ವಿ ಆಟಗಾರರು
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಅಮಿತ್ ಮಿಶ್ರಾ ಮತ್ತು ಶಿಖರ್ ಧವನ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಯಶಸ್ವಿ ಆಟಗಾರರಾಗಿದ್ದಾರೆ. ಅಮಿತ್ ಮಿಶ್ರಾ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಇದುವರೆಗೂ ಒಟ್ಟು 9 ವಿಕೆಟ್‍ಗಳನ್ನು ಪಡೆದಿದ್ದಾರೆ ಮತ್ತು ಶಿಖರ್ ಧವನ್ ಚೆನ್ನೈ ವಿರುದ್ಧದ ಪಂದ್ಯಗಳಲ್ಲಿ ಒಟ್ಟು 302 ರನ್ ಗಳಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications