For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಡೆಲ್ಲಿ vs ಹೈದರಾಬಾದ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021, Match 20 : DC vs SRH Head-to-head record, highest run-getters, top wicket-takers

ಐಪಿಎಲ್ 14ನೇ ಆವೃತ್ತಿಯ 20ನೇ ಪಂದ್ಯ ಭಾನುವಾರ (ಏಪ್ರಿಲ್ 25) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಒಂದರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು, 4 ಪಂದ್ಯಗಳನ್ನಾಡಿ ಕೇವಲ ಒಂದು ಪಂದ್ಯದಲ್ಲಿ ಜಯಗಳಿಸಿ 3 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ಎದುರಿಸಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 18 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಸನ್ ರೈಸರ್ಸ್ ಹೈದರಾಬಾದ್ ತಂಡ 11 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ 7 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲುಗೈ ಸಾಧಿಸಿದೆ.

ಡೆಲ್ಲಿ - ಹೈದರಾಬಾದ್ ಮುಖಾಮುಖಿಯ ಕಳೆದ 5 ಪಂದ್ಯಗಳು

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದಿರುವ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 2 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಡೆಲ್ಲಿ ಮತ್ತು ಹೈದರಾಬಾದ್ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ :

2020ರ ಐಪಿಎಲ್ ಟೂರ್ನಿಯ ಲೀಗ್‌ನ ಎರಡೂ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆಲುವು ಸಾಧಿಸಿತ್ತು. ಆದರೆ ನಾಕ್‌ಔಟ್‌ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಜಯಗಳಿಸಿತ್ತು.

ಡೆಲ್ಲಿ - ಹೈದರಾಬಾದ್ ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರು :

ಡೆಲ್ಲಿ ಮತ್ತು ಹೈದ್ರಾಬಾದ್ ಮುಖಾಮುಖಿ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಶಿಖರ್ ಧವನ್ 505 ರನ್ ಗಳಿಸಿ ಅತ್ಯಧಿಕ ರನ್ ಗಳಿಸಿದ ಆಟಗಾರನಾಗಿದ್ದಾರೆ. ಉಳಿದಂತೆ ಡೇವಿಡ್ ವಾರ್ನರ್ 450 ಮತ್ತು ಕೇನ್ ವಿಲಿಯಮ್ಸನ್ 405 ರನ್ ಗಳಿಸಿದ್ದಾರೆ.

ಡೆಲ್ಲಿ - ಹೈದರಾಬಾದ್ ಮುಖಾಮುಖಿ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರು :

ಡೆಲ್ಲಿ ಮತ್ತು ಹೈದರಾಬಾದ್ ಮುಖಾಮುಖಿ ಪಂದ್ಯಗಳಲ್ಲಿ ರಶೀದ್ ಖಾನ್ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ. ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ರಶೀದ್ ಖಾನ್ 13 ವಿಕೆಟ್‍ಗಳನ್ನು ಪಡೆದುಕೊಂಡಿದ್ದರೆ, ಭುವನೇಶ್ವರ್ ಕುಮಾರ್ 13 ಹಾಗೂ ಅಮಿತ್ ಮಿಶ್ರಾ 9 ವಿಕೆಟ್‍ಗಳನ್ನು ಪಡೆದಿದ್ದಾರೆ.

ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಎರಡೂ ತಂಡಗಳ ಆಟಗಾರರ ಪಟ್ಟಿ

ಅತಿಹೆಚ್ಚು ರನ್ ಗಳಿಸಿದವರು :

ಎರಡೂ ತಂಡಗಳ ಆಟಗಾರರ ಪೈಕಿ ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದವರೆಂದರೆ ಶಿಖರ್ ಧವನ್ 618 ರನ್, ಡೇವಿಡ್ ವಾರ್ನರ್ 548 ರನ್ ಹಾಗೂ ಶ್ರೇಯಸ್ ಐಯ್ಯರ್ 519 ರನ್.

ಅತಿ ಹೆಚ್ಚು ವಿಕೆಟ್ ಪಡೆದವರು :

ಎರಡೂ ತಂಡಗಳ ಆಟಗಾರರ ಪೈಕಿ ಕಳೆದ ಆವೃತ್ತಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರೆಂದರೆ ಕಗಿಸೊ ರಬಾಡ 30 ವಿಕೆಟ್ಸ್, ಅನ್ರಿಚ್ ನಾರ್ಕಿಯಾ 22 ವಿಕೆಟ್ಸ್ ಮತ್ತು ರಶೀದ್ ಖಾನ್ 22 ವಿಕೆಟ್ಸ್.

Story first published: Monday, April 26, 2021, 9:03 [IST]
Other articles published on Apr 26, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+