ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ಡೆಲ್ಲಿ vs ಹೈದರಾಬಾದ್: ಸಂಭಾವ್ಯ ತಂಡ, ಹವಾಮಾನ, ಪಿಚ್ ರಿಪೋರ್ಟ್

IPL 2021, Match 20, DC vs SRH Preview, Chennai Weather Forecast, Pitch Report, Playing XIs,

ಐಪಿಎಲ್ 14ನೇ ಆವೃತ್ತಿಯ 20ನೇ ಪಂದ್ಯ ಭಾನುವಾರ ( ಏಪ್ರಿಲ್ 25 ) ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಒಂದರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು, 4 ಪಂದ್ಯಗಳನ್ನಾಡಿ ಕೇವಲ ಒಂದು ಪಂದ್ಯದಲ್ಲಿ ಜಯಗಳಿಸಿ 3 ಪಂದ್ಯಗಳಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ಎದುರಿಸಲಿದೆ.

ಪಂದ್ಯದ ಆರಂಭ : ಪಂದ್ಯ ಸಂಜೆ 7.30ಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ ತೀರಾ ಕಡಿಮೆ. 32° ಉಷ್ಣಾಂಶ ಇರಲಿದ್ದು, ಆರ್ದ್ರತೆ 69% ರಿಂದ 80% ಇರಲಿದೆ. ಪಂದ್ಯ ಸಂಜೆಯ ವೇಳೆ ಆರಂಭವಾಗುವುದರಿಂದ ಇಬ್ಬನಿ ಬೀಳಲಿದೆ.

ಪಿಚ್ ರಿಪೋರ್ಟ್

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಪಂದ್ಯಗಳನ್ನು ಗಮನಿಸಿದರೆ ಇದೊಂದು ಬೌಲರ್ ಸ್ನೇಹಿ ಪಿಚ್ ಎಂದು ಎಲ್ಲರಿಗೂ ತಿಳಿದು ಬಿಡುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ 150 ರನ್ ಗಳಿಸಿದರೆ ಸಾಕು ಸ್ಪರ್ಧಾತ್ಮಕ ಆಡಬಹುದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊಲ್ಕತಾ ನೈಟ್ ರೈಡರ್ಸ್ ವಿರುದ್ಧ ಈ ಪಿಚ್‌ನಲ್ಲಿ 204 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಪಂದ್ಯಗಳಲ್ಲಿ 130-159 ರನ್‌ ಗಳು ಮಾತ್ರ ಬಂದಿವೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ :

ಶಿಖರ್ ಧವನ್, ಪೃಥ್ವಿ ಶಾ, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ/ವಿ.ಕೀ), ಮಾರ್ಕಸ್ ಸ್ಟೊಯ್ನಿಸ್, ಲಲಿತ್ ಯಾದವ್, ಕ್ರಿಸ್ ವೋಕ್ಸ್ , ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡ, ಅವೇಶ್ ಖಾನ್ ಹಾಗೂ ಅಮಿತ್ ಮಿಶ್ರಾ.

ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ :

ಡೇವಿಡ್ ವಾರ್ನರ್ (ನಾಯಕ), ಜಾನಿ ಬೈರ್‌ಸ್ಟೋವ್ (ವಿ.ಕೀ), ಮನೀಷ್ ಪಾಂಡೆ, ಕೇನ್ ವಿಲಿಯಮ್ಸನ್/ಜೇಸನ್ ಹೋಲ್ಡರ್, ವಿಜಯಶಂಕರ್, ಅಬ್ದುಲ್ ಸಮದ್, ಕೇದಾರ್ ಜಾಧವ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಶಹಬಾಜ್ ನದೀಮ್ ಮತ್ತು ಖಲೀಲ್ ಅಹ್ಮದ್,

Story first published: Monday, April 26, 2021, 9:03 [IST]
Other articles published on Apr 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X