Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

RCB vs DC Preview: ಬೆಂಗಳೂರು vs ಡೆಲ್ಲಿ, ಸಂಭಾವ್ಯ ತಂಡ ಹಾಗೂ ಪಂದ್ಯದ ಮಾಹಿತಿ

IPL 2021 Match 21,RCB vs DC: Preview, probable XI, ahmedabad weather forecast and pitch report

ಐಪಿಎಲ್ 14ನೇ ಆವೃತ್ತಿಯ 22ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಎರಡು ತಂಡಗಳು ಕೂಡ ಅಂಕಪಟ್ಟಿಯಲ್ಲಿ ಅಗ್ರ ಮೂರರಲ್ಲಿ ಸ್ಥಾನ ಪಡೆದುಕೊಂಡಿದೆ. ಸಾಕಷ್ಟು ಬಲಿಷ್ಠವಾಗಿರುವ ಈ ಎರಡು ತಂಡಗಳ ಕಾದಾಟ ಕುತೂಹಲ ಮೂಡಿಸಿದೆ.

ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋಡಿ ಸ್ಟೇಡಿಯಂನಲ್ಲಿ ನಡೆಯಲಿದ್ದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆರ್‌ಸಿಬಿ ಹಾಗೂ ಡೆಲ್ಲಿ ಎರಡು ತಂಡಗಳಿಗೂ ಅಹ್ಮದಾಬಾದ್‌ನಲ್ಲಿ ಈ ಬಾರಿಯ ಆವೃತ್ತಿಯಲ್ಲಿ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

ಅಹ್ಮದಾಬಾದ್‌ನ ವಾತಾವರಣ ಪಂದ್ಯದ ಸಮಯದಲ್ಲಿ 40 ಡಿಗ್ರಿ ಸೆಲ್ಸಿಯಸ್‌ನಷ್ಟು ಇರುವ ಸಂಭವವಿದೆ. ಆದರೆ ಇಬ್ಬನಿ ಪಂದ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆಯಿದೆ. ಟಾಸ್ ಗೆಲ್ಲುವ ತಂಡ ಮೊದಲಿಗೆ ಬ್ಯಾಟಿಂಗ್ ನಡೆಸುವ ಸಾಧ್ಯತೆಯಿದೆ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ:
ಪೃಥ್ವಿ ಶಾ, ಶಿಖರ್ ಧವನ್, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ/ ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮಿಯರ್, ಆಕ್ಸಾರ್ ಪಟೇಲ್, ಇಶಾಂತ್ ಶರ್ಮಾ, ಅಮಿತ್ ಮಿಶ್ರಾ, ಕಗಿಸೊ ರಬಾಡ ಮತ್ತು ಅವೇಶ್ ಖಾನ್.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ
ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಶಹಬಾಜ್ ಅಹ್ಮದ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜುವೇಂದ್ರ ಚಹಲ್.

Story first published: Tuesday, April 27, 2021, 12:26 [IST]
Other articles published on Apr 27, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+