Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಚೆನ್ನೈ ಹಾಗೂ ಹೈದರಾಬಾದ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021, Match 23: CSK vs SRH Head-to-head records, highest run-getters, top wicket-takers

ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ಬುಧವಾರ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡುತ್ತಿರುವ ಸಿಎಸ್‌ಕೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಪೈಪೋಟಿ ನಡೆಸುತ್ತಿದೆ. ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಾತ್ರ ಸತತ ಸೋಲುಗಳಿಂದ ಕಂಗೆಟ್ಟಿದ್ದ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಇಂದಿನ ಪಂದ್ಯದ ಗೆಲುವು ಹೈದರಾಬಾದ್ ಪಾಲಿಗೆ ಬಹಳ ಮುಖ್ಯವಾಗಿದೆ.

ಐಪಿಎಲ್ ಇತಿಹಾಸದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟು 15 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಮೇಲುಗೈ ಸಾಧಿಸಿದ್ದರೆ ಹೈದರಾಬಾದ್ ಗೆದ್ದಿರುವುದು ಕೇವಲ 4 ಪಂದ್ಯಗಳನ್ನು ಮಾತ್ರ.

ಈ ಎರಡು ತಂಡಗಳು ಕಳೆದ ಐಪಿಎಲ್ ಆವೃತ್ತಿಯಲ್ಲಿ ದುಬೈ ಅಂಗಳದಲ್ಲಿ ಮುಖಾಮುಖಿಯಾದಾಗ ಚೆನ್ನೈ ಸೂಪರ್ ಕಿಂಗ್ಸ್ 20 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತ್ತು. ಎರಡನೇ ಬಾರಿಗೆ ಮುಖಾಮುಖಿಯಾದಾಗ ಸನ್‌ರೈಸರ್ಸ್ ಹೈದರಾಬಾದ್ ತಂಡ 7 ರನ್‌ಗಳ ಅಂತರದಿಂದ ಗೆದ್ದಿತ್ತು.

ಇನ್ನು ಈ ಎರಡು ತಂಡಗಳ ಮುಖಾಮುಖಿಯಲ್ಲಿ ಸುರೇಶ್ ರೈನಾ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ರೈನಾ 415 ರನ್‌ಗಳಿಸಿದ್ದರೆ ಎರಡನೇ ಸ್ಥಾನದಲ್ಲಿ ಧೋನಿಯಿದ್ದು 399 ರನ್‌ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ 353 ರನ್‌ಗಳಿಸಿರುವ ಶೇನ್ ವಾಟ್ಸನ್ ಇದ್ದಾರೆ.

ಚೆನ್ನೈ ಹಾಗೂ ಹೈದರಾಬಾದ್ ತಣಡಗಳ ಮುಖಾಮುಖಿಯಲ್ಲಿ ಬೌಲಿಂಗ್‌ನಲ್ಲಿ ಡ್ವೇಯ್ನ್ ಬ್ರಾವೀ ಹೆಚ್ಚಿನ ಯಶಸ್ಸು ಗಳಿಸಿದ ಆಟಗಾರನಾಗಿದ್ದಾರೆ. ಬ್ರಾವೋ 17 ವಿಕೆಟ್ ಪಡೆದುಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿರುವ ದೀಪಕ್ ಚಾಹರ್ 9 ವಿಕೆಟ್ ಕಬಳಿಸಿದ್ದಾರೆ.

Story first published: Wednesday, April 28, 2021, 13:07 [IST]
Other articles published on Apr 28, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+