MI vs RR Preview: ಮುಂಬೈ vs ರಾಜಸ್ಥಾನ್, ಸಂಭಾವ್ಯ ತಂಡ ಹಾಗೂ ಪಂದ್ಯದ ಮಾಹಿತಿ

ಐಪಿಎಲ್ ಅಂಗಳದಲ್ಲಿ ಇಂದು ಎರಡು ಪಂದ್ಯಗಳು ನಡೆಯಲಿದೆ. ಇಂದಿನ ಮೊದಲ ಹಣಾಹಣಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಹಾಲಿ ಚಾಂಪಿಯನ್ ಮುಂಬೈ ಈ ಬಾರಿಯ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದು ರಾಜಸ್ಥಾನ್ ರಾಯಲ್ಸ್ ಕೂಡ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದೆ.

ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಎರಡು ತಂಡಗಳು ಕೂಡ ಆಡಿದ 5 ಪಂದ್ಯಗಳಲ್ಲಿ ತಲಾ ಮೂರು ಸೋಲು ಹಾಗೂ ಎರಡು ಗೆಲುವು ಸಾಧಿಸಿದೆ. ಆದರೆ ನೆಟ್‌ರನ್‌ರೇಟ್‌ನಲ್ಲಿ ಆರ್‌ಆರ್‌ಗಿಂತ ಅಲ್ಪ ಮುನ್ನಡೆಯಲ್ಲಿರುವ ರೋಹಿತ್ ಪಡೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದರೆ ರಾಜಸ್ಥಾನ್ 7ನೇ ಸ್ಥಾನದ್ಲಲಿದೆ

ಪಂದ್ಯದ ಆರಂಭ

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ಮಧ್ಯಾಹ್ನ 3:30ಕ್ಕೆ ಆರಂಭವಾಗಲಿದೆ.

ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ಪಂದ್ಯ ಮಧ್ಯಾಹ್ನದ ನಂತರ ನಡೆಯಲಿರುವ ಕಾರಣ ಬಿಸಿಲಿನ ಪ್ರಭಾವ ಹೆಚ್ಚಿರಲಿದೆ. ಸರಾಸರಿ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ. ಪಿಚ್ ಸ್ಪಿನ್ನರ್‌ಗಳಿಗೆ ಪೂರಕವಾಗಿದ್ದು ನಿಧಾನಗತಿಯಲ್ಲಿ ವರ್ತಿಸಲಿದೆ. 160 ರನ್‌ ಎದುರಾಳಿಗೆ ಸವಾಲಿನ ಮೊತ್ತವೆನಿಸಬಹುದು.

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ:
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕಿರಾನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಪಿಯೂಷ್ ಚಾವ್ಲಾ/ಜಯಂತ್ ಯಾದವ್, ರಾಹುಲ್ ಚಾಹರ್, ಟ್ರೆಂಟ್ ಬೋಲ್ಟ್, ಜಸ್ಪ್ರೀತ್ ಬುಮ್ರಾ.

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ
ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ /ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಶಿವಮ್ ದುಬೆ, ರಾಹುಲ್ ತೆವಾಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಜಯದೇವ್ ಉನಾದ್ಕಟ್ / ಶ್ರೇಯಸ್ ಗೋಪಾಲ್, ಮುಸ್ತಾಫಿಜುರ್ ರಹಮಾನ್, ಚೇತನ್ ಸಕರಿಯಾ.

For Quick Alerts
ALLOW NOTIFICATIONS
For Daily Alerts
Story first published: Thursday, April 29, 2021, 10:39 [IST]
Other articles published on Apr 29, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X