For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಮುಂಬೈ vs ರಾಜಸ್ಥಾನ್, ಸಂಭಾವ್ಯ ದಾಖಲೆಗಳು ಹಾಗೂ ಮೈಲಿಗಲ್ಲುಗಳು

IPL 2021, match 24, Mumbai Indians and rajasthan royals, records and milestones details

ಐಪಿಎಲ್ 14ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ದೆಹಲಿಯ ಅರುಣ್ ಜೇಟ್ಲೀ ಕ್ರೀಡಾಂಗಣದಲ್ಲಿ ನಡೆಯುವ ಈ ಪಂದ್ಯದಲ್ಲಿ ಎರಡು ತಮಂಡಗಳು ಕೂಡ ಗೆಲುವಿಗಾಗಿ ತೀವ್ರಕಸರತ್ತು ನಡೆಸಲಿದೆ. ಈ ಪಂದ್ಯದಲ್ಲಿ ಕೆಲ ಆಟಗಾರರು ಮಹತ್ವದ ದಾಖಲೆ ಹಾಗೂ ಮೈಲಿಗಲ್ಲುಗಳನ್ನು ದಾಟುವ ನಿರೀಕ್ಷೆಯಿದೆ. ಅಂತಾ ನಿರೀಕ್ಷೆ ಹಾಗೂ ಮೈಲಿಗಲ್ಲುಗಳ ವಿವರ ಇಲ್ಲಿದೆ.

ರೋಹಿತ್ ಶರ್ಮಾ
*ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 32 ರನ್‌ಗಳಿಸಿದರೆ ಐಪಿಎಲ್‌ನಲ್ಲಿ ಒಟ್ಟಾರೆ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ಧವನ್ ಅವರನ್ನು ಹಿಂದಿಕ್ಕಿ ಮೂರನೇ ಸ್ಥಾನವನ್ನು ಪಡೆಯಲಿದ್ದಾರೆ. 42 ರನ್‌ಗಳಿಸಿದರೆ ಎರಡನೇ ಸ್ಥಾನದಲ್ಲಿರುವ ಸುರೇಶ್ ರೂನಾ ಅವರನ್ನು ಹಿಂದಿಕ್ಕಲಿದ್ದಾರೆ. ಮೊದಲ ಸ್ಥಾನದಲ್ಲಿ ವಿರಾಟ್ ಕೊಹ್ಲಿಯಿದ್ದು 6041 ರನ್‌ಗಳಿಸಿದ್ದಾರೆ.

*ಇಂದಿನ ಪಂದ್ಯದಲ್ಲಿ 5 ಸಿಕ್ಸರ್ ಸಿಡಿಸಿದರೆ ಟಿ20 ಕ್ರಿಕೆಟ್‌ನಲ್ಲಿ ಒಟ್ಟಾರೆಯಾಗಿ 400 ಸಿಕ್ಸರ್ ಬಾರಿಸಿದ ಆಟಗಾರನಾಗಲಿದ್ದಾರೆ

ಇಶಾನ್ ಕಿಶನ್
ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಇಶಾನ್ ಕಿಶನ್ ಇಂದಿನ ಪಂದ್ಯದಲ್ಲಿ 35 ರನ್‌ಗಳಿಸಿದರೆ ಐಪಿಎಲ್‌ನಲ್ಲಿ 1000೦ ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ.

ಜೋಸ್ ಬಟ್ಲರ್
ರಾಜಸ್ಥಾನ್ ರಾಯಲ್ಸ್ ತಂಡದ ಈ ಆರಂಭಿಕ ಆಟಗಾರ ಇಂದಿನ ಪಂದ್ಯದಲ್ಲಿ 62 ರನ್‌ಗಳಿಸಿದರೆ ಐಪಿಎಲ್‌ನಲ್ಲಿ 2000 ರನ್‌ಗಳಿಸಿದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ.

ಸಂಜು ಸ್ಯಾಮ್ಸನ್
ಇಂದಿನ ಪಂದ್ಯದಲ್ಲಿ ಸಂಜು 3 ಸಿಕ್ಸರ್ ಬಾರಿಸಿದರೆ ರಾಜಸ್ಥಾನ್ ರಾಯಲ್ಸ್ ಪರವಾಗಿ 100 ಸಿಕ್ಸರ್ ಬಾರಿಸಿದಂತಾಗುತ್ತದೆ. ಇದಕ್ಕೂ ಮೊದಲ ರಾಜಸ್ಥಾನ್ ಪರವಾಗಿ ಶೇನ್ ವಾಟ್ಸನ್ ಈ ಸಾಧನೆ ಮಾಡಿದ್ದರು.

ಕೃನಾಲ್ ಪಾಂಡ್ಯ
ಇಂದಿನ ಪಂದ್ಯದಲ್ಲಿ ಒಂದು ವಿಕೆಟ್ ಪಡೆದರೆ ಕೃನಾಲ್ ಪಾಂಡ್ಯ ಐಪಿಎಲ್‌ನಲ್ಲಿ 50 ವಿಕೆಟ್ ಪಡೆದಂತಾಗುತ್ತದೆ.

Story first published: Thursday, April 29, 2021, 12:43 [IST]
Other articles published on Apr 29, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+