DC vs KKR Preview: ಡೆಲ್ಲಿ vs ಕೊಲ್ಕತ್ತಾ, ಸಂಭಾವ್ಯ ತಂಡ ಹಾಗೂ ಪಂದ್ಯದ ಮಾಹಿತಿ

ಈ ಬಾರಿಯ ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಇಂದು ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಇಂದಿನ ಪಂದ್ಯದಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ತಂಡಕ್ಕೆ ಎದುರಾಳಿಯಾಗಿರುವುದು ಕೊಲ್ಕತ್ತಾ ನೈಟ್ ರೈಡರ್ಸ್. ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿಕೊಂಡು ಬಂದಿರುವ ಕೆಕೆಆರ್ ಗೆಲುವಿನ ಹಾದಿಗೆ ಮರಳಿದ್ದು ಗೆಲುವಿನ ಕ್ಷಣಗಳನ್ನು ಮುಂದುವರಿಸಲು ಬಯಸಿದೆ.
ಪಂದ್ಯದ ಆರಂಭ:
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್:
ಅಹ್ಮದಾಬಾದ್‌ನ ವಾತಾವರಣ ಪಂದ್ಯದ ವೇಳೆಗೆ ಸಾಕಷ್ಟು ಉಷ್ಣಾಂಶದಿಂದ ಕೂಡಿರಲಿದೆ.
ಪಂದ್ಯ ಮಧ್ಯಾಹ್ನದ ನಂತರ ನಡೆಯಲಿರುವ ಕಾರಣ ಬಿಸಿಲಿನ ಪ್ರಭಾವ ಹೆಚ್ಚಿರಲಿದೆ. ಸರಾಸರಿ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ನಡೆಯುವ ವೇಳೆ ಇರುವ ಸಾಧ್ಯತೆಯಿದೆ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪರಿಣಾಮ ಬೀರುವ ಸಾಧ್ಯತೆಯಿದೆ.
ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ/ವಿಕೆಟ್ ಕೀಪರ್), ಮಾರ್ಕಸ್ ಸ್ಟೋಯಿನಿಸ್, ಶಿಮ್ರಾನ್ ಹೆಟ್ಮಿಯರ್, ಆಕ್ಷರ್ ಪಟೇಲ್, ಇಶಾಂತ್ ಶರ್ಮಾ, ಅಮಿತ್ ಮಿಶ್ರಾ, ಕಗಿಸೊ ರಬಡಾ ಮತ್ತು ಅವೇಶ್ ಖಾನ್.
ಕೋಲ್ಕತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಬ್ಮನ್ ಗಿಲ್, ರಾಹುಲ್ ತ್ರಿಪಾಠಿ, ನಿತೀಶ್ ರಾಣಾ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಶಿವಂ ಮಾವಿ ಮತ್ತು ಪ್ರಸಿದ್ಧ್ ಕೃಷ್ಣ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications