ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs PBKS Preview: ಬೆಂಗಳೂರು vs ಪಂಜಾಬ್, ಸಂಭಾವ್ಯ ತಂಡ ಹಾಗೂ ಪಂದ್ಯದ ಮಾಹಿತಿ

IPL 2021 Match 26, RCB vs PBKS: Preview, probable XI, Ahmedabad weather forecast and pitch report

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಶುಕ್ರವಾರ ಮತ್ತೊಂದು ಪಂದ್ಯಕ್ಕೆ ಸಜ್ಜಾಗಿದೆ. ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣೆಸಾಟವನ್ನು ನಡೆಸಲಿದ್ದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನದ ಮೂಲಕ ಮಿಂಚುತ್ತಿರುವ ವಿರಾಟ್ ಕೊಹ್ಲಿ ಬಳಗ ಸೋಲಿನ ಮೇಲೆ ಸೋಲು ಕಾಣುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧವೂ ಗೆಲುವಿನ ನಿರೀಕ್ಷೆಯಲ್ಲಿದೆ.

ಪಂದ್ಯದ ಆರಂಭ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯಕ್ಕೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಆತಿಥ್ಯವನ್ನು ವಹಿಸಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್

ಅಹ್ಮದಾಬಾದ್‌ನ ವಾತಾವರಣ ಪಂದ್ಯದ ವೇಳೆಗೆ ಸಾಕಷ್ಟು ಉಷ್ಣಾಂಶದಿಂದ ಕೂಡಿರಲಿದ್ದು ಸಂಜೆ ಸರಾಸರಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪಂದ್ಯದ ಮೇಲೆ ಪರಿಣಾಮ ಬೀರಲಿದೆ.

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ
ಕೆ.ಎಲ್. ರಾಹುಲ್ (ನಾಯಕ/ವಿಕೆಟ್ ಕೀಪರ್), ಮಾಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಡೇವಿಡ್ ಮಲನ್/ನಿಕೋಲಸ್ ಪೂರನ್, ದೀಪಕ್ ಹೂಡಾ, ಮೊಯಿಸಸ್ ಹೆನ್ರಿಕ್ಸ್, ಶಾರುಖ್ ಖಾನ್, ಜೈ ರಿಚರ್ಡ್ಸನ್ /ಕ್ರಿಸ್ ಜೋರ್ಡಾನ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಮತ್ತು ಅರ್ಷ್‌ದೀಪ್ ಸಿಂಗ್.

ಆರ್‌ಸಿಬಿ ಸಂಭಾವ್ಯ ತಂಡ
ದೇವದುತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಡೇನಿಯಲ್ ಸ್ಯಾಮ್ಸ್, ಕೈಲ್ ಜಾಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಾಹಲ್.

Story first published: Saturday, May 1, 2021, 11:52 [IST]
Other articles published on May 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X