CSK vs MI Preview: ಮುಂಬೈ vs ಚೆನ್ನೈ, ಸಂಭಾವ್ಯ ತಂಡ ಹಾಗೂ ಪಂದ್ಯದ ಮಾಹಿತಿ

14ನೇ ಆವೃತ್ತಿಯ ಐಪಿಎಲ್‌ನಲ್ಲಿ ಇಂದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಹಾಗೂ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯುಗುತ್ತಿದೆ. ಈ ಬಾರಿಯ ಆವೃತ್ತಿಯಲ್ಲಿ ಧೋನಿ ಪಡೆ ಅದ್ಭುತ ಪ್ರದರ್ಶನದ ಮೂಲಕ ಟೂರ್ನಿಯಲ್ಲಿ ಅತ್ಯಂತ ಯಶಸ್ವಿ ತಂಡ ಎನಿಸಿದ್ದರೆ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ನಿರೀಕ್ಷಿತ ಪ್ರದರ್ಶನ ನೀಡದೆ ಮುಗ್ಗರಿಸಿದೆ.
ಪಂದ್ಯದ ಆರಂಭ
ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಆತಿಥ್ಯವನ್ನು ವಹಿಸಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಹವಾಮಾನ ವರದಿ ಹಾಗೂ ಪಿಚ್ ರಿಪೋರ್ಟ್
ದೆಹಲಿಯ ವಾತಾವರಣ ಪಂದ್ಯದ ವೇಳೆಗೆ ಸಾಕಷ್ಟು ಉಷ್ಣಾಂಶದಿಂದ ಕೂಡಿರಲಿದ್ದು ಸಂಜೆ ಸರಾಸರಿ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿರುವ ಸಾಧ್ಯತೆಯಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪಂದ್ಯದ ಮೇಲೆ ಪರಿಣಾಮ ಬೀರಲಿದೆ.
ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ಕೃನಾಲ್ ಪಾಂಡ್ಯ, ಕಿರಾನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ರಾಹುಲ್ ಚಹರ್, ಟ್ರೆಂಟ್ ಬೊಲ್ಟ್ ಮತ್ತು ಜಸ್ಪ್ರೀತ್ ಬುಮ್ರಾ.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ
ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್.ಧೋನಿ (ನಾಯಕ/ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಲುಂಗಿ ಎನ್‌ಗಿಡಿ, ಶಾರ್ದುಲ್ ಠಾಕೂರ್ ಮತ್ತು ದೀಪಕ್ ಚಾಹರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications