ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021 : ರಾಜಸ್ಥಾನ್ vs ಹೈದರಾಬಾದ್ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IPL 2021, Match 28 : RR vs SRH Head-to-head record, highest run-getters, top wicket-takers

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಪ್ರಸ್ತುತ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಭಾನುವಾರ (ಮೇ 2) ಹಣಾಹಣಿ ನಡೆಸಲಿವೆ. ಟೂರ್ನಿಯಲ್ಲಿ 6 ಪಂದ್ಯಗಳನ್ನಾಡಿ ಕೇವಲ 1 ಪಂದ್ಯದಲ್ಲಿ ಜಯಗಳಿಸಿ 5 ಪಂದ್ಯದಲ್ಲಿ ಸೋತಿರುವ ಹೈದರಾಬಾದ್ ತಂಡವು 6 ಪಂದ್ಯಗಳನ್ನಾಡಿ 2 ಪಂದ್ಯಗಳಲ್ಲಿ ಜಯಗಳಿಸಿ 4 ಪಂದ್ಯಗಳಲ್ಲಿ ಸೋಲುಂಡಿರುವ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಎರಡೂ ತಂಡಗಳಿಗೂ ಸಹ ಬಹುಮುಖ್ಯವಾಗಿದೆ.

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು 13 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 6 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 7 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಒಟ್ಟಾರೆ ಐಪಿಎಲ್ ಇತಿಹಾಸದ ಮುಖಾಮುಖಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲುಗೈ ಸಾಧಿಸಿದೆ.

ರಾಜಸ್ಥಾನ್ - ಹೈದರಾಬಾದ್ ಕೊನೆಯ 5 ಪಂದ್ಯಗಳ ಫಲಿತಾಂಶ

ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಮುಖಾಮುಖಿಯ ಕಳೆದ 5 ಪಂದ್ಯಗಳ ಪೈಕಿ ರಾಜಸ್ಥಾನ್ ರಾಯಲ್ಸ್ 2 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ ಸನ್ ರೈಸರ್ಸ್ ಹೈದರಾಬಾದ್ ತಂಡ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಜಸ್ತಾನ್ ಮತ್ತು ಹೈದರಾಬಾದ್ ತಂಡಗಳ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಕೂಡ ಸನ್ ರೈಸರ್ಸ್ ಹೈದರಾಬಾದ್ ತಂಡ ಮೇಲುಗೈ ಸಾಧಿಸಿದೆ.

ಕಳೆದ ಆವೃತ್ತಿಯ ಫಲಿತಾಂಶ

2020ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಲೀಗ್ ಹಂತದ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಈ 2 ಪಂದ್ಯಗಳ ಪೈಕಿ ಒಂದರಲ್ಲಿ ರಾಜಸ್ಥಾನ್ ಗೆಲುವು ಸಾಧಿಸಿದ್ದರೆ ಮತ್ತೊಂದು ಪಂದ್ಯದಲ್ಲಿ ಹೈದರಾಬಾದ್ ಜಯಗಳಿಸಿದೆ.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿದವರು : ಸಂಜು ಸ್ಯಾಮ್ಸನ್ 382 ರನ್, ಅಜಿಂಕ್ಯಾ ರಹಾನೆ 347 ರನ್ ಹಾಗೂ ಶಿಖರ್ ಧವನ್ 253 ರನ್.

ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಅತಿಹೆಚ್ಚು ವಿಕೆಟ್ ಪಡೆದವರು : ಜೇಮ್ಸ್ ಫಾಕ್ನರ್ 12 ವಿಕೆಟ್ಸ್, ಭುವನೇಶ್ವರ್ ಕುಮಾರ್ 9 ವಿಕೆಟ್ಸ್ ಹಾಗೂ ಡೇಲ್ ಸ್ಟೇನ್ 8 ವಿಕೆಟ್ಸ್

ಕಳೆದ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬ್ಯಾಟ್ಸ್‌ಮನ್‌ಗಳು : ಡೇವಿಡ್ ವಾರ್ನರ್ 548 ರನ್‌, ಮನೀಷ್ ಪಾಂಡೆ 425 ರನ್ ಹಾಗೂ ಸಂಜು ಸ್ಯಾಮ್ಸನ್ 375 ರನ್.

ಕಳೆದ ಐಪಿಎಲ್ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬೌಲರ್‌ಗಳು : ರಶೀದ್ ಖಾನ್ 20 ವಿಕೆಟ್ಸ್, ಜೋಫ್ರಾ ಆರ್ಚರ್ 20 ವಿಕೆಟ್ಸ್ ಹಾಗೂ ಟಿ ನಟರಾಜನ್ 16 ವಿಕೆಟ್ಸ್

Story first published: Sunday, May 2, 2021, 12:53 [IST]
Other articles published on May 2, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X