For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021, ಡೆಲ್ಲಿ - ಪಂಜಾಬ್ : ಸಂಭಾವ್ಯ ತಂಡ ಹವಾಮಾನ ಪಿಚ್ ರಿಪೋರ್ಟ್

 IPL 2021, Match 29, DC vs PBKS Preview, Ahmadabad Weather Forecast, Pitch Report, Playing XIs,

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29ನೇ ಪಂದ್ಯ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡಲಿವೆ. ಟೂರ್ನಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು 2 ಪಂದ್ಯಗಳನ್ನು ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು, 7 ಪಂದ್ಯಗಳನ್ನಾಡಿ 3ಪಂದ್ಯಗಳಲ್ಲಿ ಜಯಗಳಿಸಿ 4 ಪಂದ್ಯಗಳಲ್ಲಿ ಸೋಲುಂಡಿರುವ ಪಂಜಾಬ್ ಕಿಂಗ್ಸ್ ತಂಡ ಎದುರಿಸಲಿದೆ.

ಪಂದ್ಯದ ಆರಂಭ : ಪಂದ್ಯ ಸಂಜೆ 7.30ಕ್ಕೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಲಭ್ಯವಿರಲಿದ್ದು ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

ಹವಾಮಾನ ವರದಿ

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಯಾವುದೇ ಮಳೆ ಅಡ್ಡಿ ಆತಂಕ ಇರುವುದಿಲ್ಲ. 38° ಸೆಲ್ಸಿಯಸ್ ಉಷ್ಣಾಂಶ ಇರಲಿದೆ. ಮುಂಬೈ ಅಥವಾ ಚೆನ್ನೈ ಪಿಚ್‌ಗಳಂತೆ ಇಲ್ಲಿ ಇಬ್ಬನಿಯ ಕಿರಿಕಿರಿ ಇರುವುದಿಲ್ಲ.

ಪಿಚ್ ವರದಿ

ನರೇಂದ್ರ ಮೋದಿ ಸ್ಟೇಡಿಯಂನ ಪಿಚ್‌ ಬ್ಯಾಟ್ಸ್‌ಮನ್‌ಗಳಿಗೆ ಸಹಕಾರಿಯಾಗಿದ್ದು, ಬೌಲರ್‌ಗಳಿಗೂ ಅಷ್ಟೇ ಸಹಕಾರಿಯಾಗಿದೆ. ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡ 170 ರನ್ ಗಳಿಸಿದರೆ ಎದುರಾಳಿ ತಂಡಕ್ಕೆ ಸ್ಪರ್ಧೆಯನ್ನೊಡ್ಡಬಹುದು.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ

ಪೃಥ್ವಿ ಶಾ, ಶಿಖರ್ ಧವನ್, ಸ್ಟೀವ್ ಸ್ಮಿತ್, ರಿಷಭ್ ಪಂತ್ (ನಾಯಕ/ವಿ.ಕೀ), ಮಾರ್ಕಸ್ ಸ್ಟೊಯ್ನಿಸ್, ಶಿಮ್ರಾನ್ ಹೆಟ್ಮಾಯೆರ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಾಡ / ಅನ್ರಿಚ್ ನಾರ್ಕಿಯಾ ಹಾಗೂ ಅವೇಶ್ ಖಾನ್

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ

ಕೆ ಎಲ್ ರಾಹುಲ್ (ನಾಯಕ), ಮಯಾಂಕ್ ಅಗರ್ವಾಲ್, ಪ್ರಭ್ ಸಿಮ್ರಾನ್ ಸಿಂಗ್, ಕ್ರಿಸ್ ಗೇಲ್, ಡೇವಿಡ್ ಮಲನ್ / ನಿಕೋಲಸ್ ಪೂರನ್, ಶಾರುಖ್ ಖಾನ್, ದೀಪಕ್ ಹೂಡಾ, ಹರ್ಪ್ರೀತ್ ಬ್ರಾರ್, ಕ್ರಿಸ್ ಜೋರ್ಡಾನ್, ಜೇ ರಿಚರ್ಡ್ಸನ್/ರಿಲೇ ಮೆರೆಡಿತ್, ರವಿ ಬಿಷ್ಣೋಯಿ ಮತ್ತು ಮೊಹಮ್ಮದ್ ಶಮಿ.

Story first published: Sunday, May 2, 2021, 16:12 [IST]
Other articles published on May 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+