ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಚೆನ್ನೈ vs ಮುಂಬೈ ಮುಖಾಮುಖಿಯಲ್ಲಿ ಯಾವುದು ಬಲಿಷ್ಠ ತಂಡ, ಯಾರಿಗೆ ಹೆಚ್ಚು ಸೋಲು?

IPL 2021, Match 30 : CSK vs MI Head-to-head record, highest run-getters, top wicket-takers

ಕಳೆದ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್ ಟೂರ್ನಿ ಕೊರೊನಾವೈರಸ್ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿತ್ತು. ಹೀಗೆ ಮುಂದೂಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್‌ ಲೀಗ್ ಟೂರ್ನಿಯ ಉಳಿದ 31 ಪಂದ್ಯಗಳು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಆರಂಭವಾಗುತ್ತಿದ್ದು ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಲಿವೆ.

ಪ್ರಧಾನಿ ಮಾತಿಗೂ ಬೆಲೆ ಕೊಡದ ನ್ಯೂಜಿಲೆಂಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇನ್ಜಮಾಮ್ ಆಗ್ರಹಪ್ರಧಾನಿ ಮಾತಿಗೂ ಬೆಲೆ ಕೊಡದ ನ್ಯೂಜಿಲೆಂಡ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇನ್ಜಮಾಮ್ ಆಗ್ರಹ

ಇನ್ನು ಸೆಪ್ಟೆಂಬರ್ 19ರ ಭಾನುವಾರದಂದು ದುಬೈ ನಗರದ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ನಡೆಯಲಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 30ನೇ ಪಂದ್ಯದಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡಗಳು ಕಾದಾಟವನ್ನು ನಡೆಸಲಿವೆ.

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಭಾರತದಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳುವ ವೇಳೆಗೆ ಅಂಕಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದರೆ ಮುಂಬೈ ಇಂಡಿಯನ್ಸ್ ತಂಡ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಹೌದು, ಟೂರ್ನಿಯಲ್ಲಿ ಇದುವರೆಗೂ 7 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ 5 ಪಂದ್ಯಗಳಲ್ಲಿ ಜಯ ಸಾಧಿಸಿ, 2 ಪಂದ್ಯಗಳಲ್ಲಿ ಮಾತ್ರ ಸೋತು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರೆ, 7 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ ತಂಡ 4 ಪಂದ್ಯಗಳಲ್ಲಿ ಜಯ ಸಾಧಿಸಿ 3 ಪಂದ್ಯಗಳನ್ನು ಸೋತು ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಚೆನ್ನೈ vs ಮುಂಬೈ: ಪಂದ್ಯದ ಮಾಹಿತಿ, ಪಿಚ್ ವರದಿ, ಸಂಭಾವ್ಯ ತಂಡಗಳು ಹಾಗೂ ನೇರಪ್ರಸಾರದ ಮಾಹಿತಿಚೆನ್ನೈ vs ಮುಂಬೈ: ಪಂದ್ಯದ ಮಾಹಿತಿ, ಪಿಚ್ ವರದಿ, ಸಂಭಾವ್ಯ ತಂಡಗಳು ಹಾಗೂ ನೇರಪ್ರಸಾರದ ಮಾಹಿತಿ

ಹೀಗೆ ಅಂಕ ಪಟ್ಟಿಯ ಟಾಪ್ 4ರ ಪಟ್ಟಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳೆರಡೂ ಸ್ಥಾನ ಪಡೆದುಕೊಂಡಿದ್ದು, ಎರಡೂ ತಂಡಗಳು ಸಹ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ತಂಡಗಳು ಎನಿಸಿಕೊಂಡಿವೆ. ಹೀಗೆ ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಇದುವರೆಗೂ ಐಪಿಎಲ್ ಇತಿಹಾಸದಲ್ಲಿ ಎಷ್ಟು ಬಾರಿ ಮುಖಾಮುಖಿಯಾಗಿವೆ, ಯಾವ ತಂಡ ಹೆಚ್ಚು ಜಯ ಸಾಧಿಸಿದೆ ಮತ್ತು ಯಾವ ತಂಡ ಅಧಿಕ ಪಂದ್ಯಗಳಲ್ಲಿ ಸೋತಿದೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ ಓದಿ..

ಚೆನ್ನೈ ಮತ್ತು ಮುಂಬೈ ಹೆಡ್ ಟು ಹೆಡ್ ಫಲಿತಾಂಶ:

ಚೆನ್ನೈ ಮತ್ತು ಮುಂಬೈ ಹೆಡ್ ಟು ಹೆಡ್ ಫಲಿತಾಂಶ:

2008ರಿಂದ 2021ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳೆರಡು ಒಟ್ಟು 33 ಪಂದ್ಯದಲ್ಲಿ ಸೆಣಸಾಟ ನಡೆಸಿದ್ದು, ಈ ಪಂದ್ಯಗಳ ಪೈಕಿ ಮುಂಬೈ ಇಂಡಿಯನ್ಸ್ ತಂಡ 20 ಪಂದ್ಯಗಳಲ್ಲಿ ಜಯ ಗಳಿಸಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ.


ಹೀಗೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಒಟ್ಟಾರೆ ಕಾದಾಟದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.

ಐಪಿಎಲ್ ಮೊದಲ ಭಾಗದಲ್ಲಿ ಯಾರದ್ದು ಮೇಲುಗೈ?

ಐಪಿಎಲ್ ಮೊದಲ ಭಾಗದಲ್ಲಿ ಯಾರದ್ದು ಮೇಲುಗೈ?

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ನಡೆದಿದ್ದ ಪಂದ್ಯ ರೋಚಕ ಅಂತ್ಯವನ್ನು ಕಂಡಿತ್ತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಫಾಫ್ ಡು ಪ್ಲೆಸಿಸ್ 28 ಎಸೆತಗಳಲ್ಲಿ 50, ಅಂಬಾಟಿ ರಾಯುಡು 27 ಎಸೆತಗಳಲ್ಲಿ 72 ಹಾಗೂ ಮೊಯಿನ್ ಅಲಿ 36 ಎಸೆತಗಳಲ್ಲಿ 58 ರನ್ ಬಾರಿಸುವುದರ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ ಗೆಲ್ಲಲು 219 ರನ್‌ಗಳ ಗುರಿಯನ್ನು ನೀಡಿತು.


ಹೀಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡದ ಪರ ಕ್ವಿಂಟನ್ ಡಿಕಾಕ್, ರೋಹಿತ್ ಶರ್ಮಾ ಮತ್ತು ಕೃನಾಲ್ ಪಾಂಡ್ಯ ಜವಾಬ್ದಾರಿಯುತ ಆಟವನ್ನಾಡಿದರು ಕೂಡ ಬೃಹತ್ ಮೊತ್ತವನ್ನು ಬೆನ್ನತ್ತುವಂತ ಸ್ಫೋಟಕ ಆಟವನ್ನು ಆಡಲಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡದ ಪರ 34 ಎಸೆತಗಳಲ್ಲಿ ಅಜೇಯ 87 ರನ್ ಗಳಿಸಿದ ಕೀರನ್ ಪೊಲಾರ್ಡ್ 20 ಓವರ್‌ಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ ಗುರಿ ಮುಟ್ಟುವಂತೆ ಮಾಡಿದರು.

ಹೀಗೆ ಮುಂಬೈ ಮತ್ತು ಚೆನ್ನೈ ತಂಡಗಳ ನಡುವೆ ಈ ಬಾರಿಯ ಐಪಿಎಲ್ ಟೂರ್ನಿಯ ಮೊದಲನೇ ಭಾಗದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೇಲುಗೈ ಸಾಧಿಸಿದೆ.

ಮುಂಬೈ ಮತ್ತು ಚೆನ್ನೈ ನಡುವಿನ ಪಂದ್ಯದ ಮಾಹಿತಿ

ಮುಂಬೈ ಮತ್ತು ಚೆನ್ನೈ ನಡುವಿನ ಪಂದ್ಯದ ಮಾಹಿತಿ

ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಟೂರ್ನಿಯ 30ನೇ ಪಂದ್ಯವಾಗಿರಲಿದ್ದು ದುಬೈ ನಗರದಲ್ಲಿರುವ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆಆರಂಭವಾಗಲಿದೆ.
ದೂರದರ್ಶನ ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್

ಲೈವ್ ಸ್ಟ್ರೀಮಿಂಗ್: ಡಿಸ್ನೆ + ಹಾಟ್‌ಸ್ಟಾರ್

Story first published: Sunday, September 19, 2021, 2:33 [IST]
Other articles published on Sep 19, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X