ಐಪಿಎಲ್ 2021: ಚೆನ್ನೈ vs ಮುಂಬೈ, ಅಪ್‌ಡೇಟ್, ಆಡುವ ಬಳಗ

ದುಬೈ, ಸೆಪ್ಟೆಂಬರ್ 19: ಐಪಿಎಲ್ 14ನೇ ಆವೃತ್ತಿಯ ಎರಡನೇ ಚರಣಕ್ಕೆ ಚಾಲನೆ ದೊರೆತಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳಿ ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಚ್ಚರಿಯೆಂದರೆ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಈ ಪಂದ್ಯದಿಮದ ಹೊರಗುಳಿದಿದ್ದಾರೆ. ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ಕಣಕ್ಕಿಳಿಯುತ್ತಿಲ್ಲ.
ಇನ್ನು ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿ ಈ ಪಂದ್ಯದಲ್ಲಿ ಅನುಭವಿ ಆಟಗಾರರಾದ ಫಾಫ್ ಡು ಪ್ಲೆಸಿಸ್ ಹಾಗೂ ಡ್ವೇಯ್ನ್ ಬ್ರಾವೋ ಕಣಕ್ಕಿಳಿಯುವ ಬಗ್ಗೆ ಅನುಮಾನಗಳಿದ್ದವು. ಕೆರೀಬಿಯನ್ ಪ್ರೀಮಿಯರ್ ಲೀಗ್ ವೇಲೆ ಈ ಇಬ್ಬರು ಆಟಗಾರರು ಗಾಯಗೊಂಡಿದ್ದ ಕಾರಣ ಮೊದಲ ಪಂದ್ಯದಲ್ಲಿ ಆಡುವ ಬಗ್ಗೆ ಗೊಂದಲಗಳಿದ್ದವು. ಆದರೆ ಇಬ್ಬರು ಆಟಗಾರರು ಕೂಡ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.
ಆದರೆ ಮುಂಬೈ ಇಂಡಿಯನ್ಸ್ ಪರವಾಗಿ ಟಾಸ್‌ಗೆ ರೋಹಿತ್ ಶರ್ಮಾ ಬದಲಿಗೆ ನಾಯಕನಾಗಿ ಕಿರಾನ್ ಪೊಲಾರ್ಡ್ ಕಣಕ್ಕಿಳಿದಿರುವುದು ಅಚ್ಚರಿ ಮೂಡಿಸಿತು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ. ಟಾಸ್ ಸಂದರ್ಭದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಕಿರಾನ್ ಪೊಲಾರ್ಡ್ ರೋಹಿತ್ ಶರ್ಮಾ ಬಗ್ಗೆ ಆತಂಕ ಪಡುತ್ತಿಲ್ಲ. ಆತನನ್ನು ನೀವೆಲ್ಲರೂ ಶೀಘ್ರವಾಗಿ ಮೈದಾನದಲ್ಲಿ ನೋಡಲಿದ್ದೀರಿ ಎಂದಿದ್ದಾರೆ. ಆದರೆ ಯಾವ ಕಾರಣಕ್ಕಾಗಿ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ ಎಂಬ ಬಗ್ಗೆ ಯಾವುದೇ ಪೊಲಾರ್ಡ್ ಮಾಹಿತಿ ನೀಡಿಲ್ಲ.
ಇನ್ನು ಹಾರ್ದಿಕ್ ಪಾಂಡ್ಯ ಕೂಡ ಈ ಪಂದ್ಯದಲ್ಲಿ ಆಡುವ ಬಳಗದಿಂದ ಹೊರಗುಳಿದಿರುವುದು ಅಚ್ಚರಿ ಮೂಡಿಸಿದೆ. ಯುವ ಆಟಗಾರ ಅನ್ಮೋಲ್ಪ್ರೀತ್ ಸಿಂಗ್ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರವಾಗಿ ಮೊದಲ ಬಾರಿಗೆ ಐಪಿಎಲ್‌ಗೆ ಪದಾರ್ಪಣೆ ಮಾಡುತ್ತಿದ್ದಾರೆ. ಉಳಿದಂತೆ ಮುಂಬೈ ಇಂಡಿಯನ್ಸ್ ತಂಡದ ಸಾಮಾನ್ಯ ಆಡುವ ಬಳಗದ ಸದಸ್ಯರು ಸ್ಥಾನ ಪಡೆದುಕೊಂಡಿದ್ದಾರೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಅನ್ಮೋಲ್ಪ್ರೀತ್ ಸಿಂಗ್, ಕೀರನ್ ಪೊಲಾರ್ಡ್ (ನಾಯಕ), ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಹರ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೋಲ್ಟ್
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್ ಮತ್ತು ನಾಯಕ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications