ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್: ಬೆಂಗಳೂರು ಮತ್ತು ಕೊಲ್ಕತ್ತಾ ನಡುವಿನ ಮುಖಾಮುಖಿಯಲ್ಲಿ ಯಾರು ಹೆಚ್ಚು ಗೆದ್ದವರು?

IPL 2021, Match 31 : KKR vs RCB Head-to-head record, highest run-getters, top wicket-takers
ಅಂಕಿ ಅಂಶಗಳ ಪ್ರಕಾರ KKR ಮತ್ತು RCB ನಡುವೆ ಮೇಲುಗೈ ಯಾರದ್ದು? | Oneindia Kannada

ಕಳೆದ ಏಪ್ರಿಲ್ ತಿಂಗಳಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 29 ಪಂದ್ಯಗಳು ಮುಗಿದ ಬಳಿಕ ವಿವಿಧ ತಂಡಗಳ ಆಟಗಾರರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತುಕೊಂಡ ಬಿಸಿಸಿಐ ಟೂರ್ನಿಯನ್ನು ಕೂಡಲೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.

ಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿಐಪಿಎಲ್: ಚೆನ್ನೈ ಮತ್ತು ಮುಂಬೈ ನಡುವಿನ ಪಂದ್ಯ ವೀಕ್ಷಿಸಿದ ನಟ ಕಿಚ್ಚ ಸುದೀಪ್ ದಂಪತಿ

ಹೀಗೆ ಭಾರತದಲ್ಲಿ ಆರಂಭವಾಗಿ ಕೊರೊನಾ ಕಾರಣದಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಇದೀಗ ಯುಎಇಯಲ್ಲಿ ಮುಂದುವರಿಸಲಾಗುತ್ತಿದ್ದು ಸೆಪ್ಟೆಂಬರ್ 19ರ ಭಾನುವಾರದಂದು ನಡೆದ ದ್ವಿತೀಯ ಭಾಗದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಡಿವೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ರನ್‌ಗಳ ಜಯವನ್ನು ಸಾಧಿಸಿದ್ದು ಸದ್ಯ ಐಪಿಎಲ್ ವೀಕ್ಷಕರ ಕಣ್ಣು ಸೆಪ್ಟೆಂಬರ್ 20ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಮೇಲಿದೆ.

ಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರಕೊಹ್ಲಿ ನಾಯಕತ್ವ ಬಿಟ್ಟುಕೊಡಬೇಕಾದ ಅಗತ್ಯವೇ ಇರಲಿಲ್ಲ, ಯಾಕೆ ಈ ನಿರ್ಧಾರ?; ದಿಗ್ಗಜ ಕ್ರಿಕೆಟಿಗನ ಬೇಸರ

ಸೆಪ್ಟೆಂಬರ್ 20ರಂದು ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಈ ಪಂದ್ಯ ಟೂರ್ನಿಯ 31ನೇ ಪಂದ್ಯವಾಗಿದ್ದು ಅಬುಧಾಬಿಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಸದ್ಯ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಅಂಕಪಟ್ಟಿಯಲ್ಲಿ ಮತ್ತಷ್ಟು ಉತ್ತಮ ಸ್ಥಾನವನ್ನು ಪಡೆದುಕೊಳ್ಳುವ ತವಕದಲ್ಲಿದ್ದರೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಈ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಹೆಚ್ಚಿದೆ.

ಬೆಂಗಳೂರು ಮತ್ತು ಕೊಲ್ಕತ್ತಾ ಹೆಡ್ ಟು ಹೆಡ್

ಬೆಂಗಳೂರು ಮತ್ತು ಕೊಲ್ಕತ್ತಾ ಹೆಡ್ ಟು ಹೆಡ್

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ 14 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಮುಖಾಮುಖಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೊಂಚ ಮೇಲುಗೈಯನ್ನು ಮಾತ್ರ ಸಾಧಿಸಿದೆ.

ಈ ಬಾರಿ ಬೆಂಗಳೂರು ತಂಡದ ಮೇಲುಗೈ

ಈ ಬಾರಿ ಬೆಂಗಳೂರು ತಂಡದ ಮೇಲುಗೈ

ಇನ್ನು ಈ ಬಾರಿ ಭಾರತದಲ್ಲಿ ನಡೆದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಒಂದು ಪಂದ್ಯದಲ್ಲಿ ಸೆಣಸಾಟ ನಡೆಸಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಎಬಿ ಡಿವಿಲಿಯರ್ಸ್ ಭರ್ಜರಿ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್‍ಗಳ ನಷ್ಟಕ್ಕೆ 204 ರನ್ ಗಳಿಸಿತ್ತು. ಹೀಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನೀಡಿದ 205 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಹಣಾಹಣಿಯಲ್ಲಿ ಬೆಂಗಳೂರು ತಂಡ 38 ರನ್‌ಗಳ ಜಯವನ್ನು ಸಾಧಿಸಿತು.

ಈ ಬಾರಿಯ ಟೂರ್ನಿಯಲ್ಲಿ ಕೊಲ್ಕತ್ತಾಗಿಂತ ಬೆಂಗಳೂರು ಉತ್ತಮ ತಂಡ

ಈ ಬಾರಿಯ ಟೂರ್ನಿಯಲ್ಲಿ ಕೊಲ್ಕತ್ತಾಗಿಂತ ಬೆಂಗಳೂರು ಉತ್ತಮ ತಂಡ

ಈ ಬಾರಿಯ ಟೂರ್ನಿಯ ಮೊದಲ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ಪಂದ್ಯಗಳನ್ನಾಡಿದ್ದು 5 ಪಂದ್ಯಗಳಲ್ಲಿ ಜಯ ಸಾಧಿಸಿ 2 ಪಂದ್ಯಗಳಲ್ಲಿ ಸೋಲುಂಡು 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದುಕೊಂಡಿದೆ. ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ಕೂಡ 7 ಪಂದ್ಯಗಳನ್ನಾಡಿದ್ದು 2 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿ, 5 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಹೀಗೆ ಈ ಬಾರಿಯ ಅಂಕಪಟ್ಟಿಯ ಸ್ಥಾನಗಳನ್ನು ಗಮನಿಸಿದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಉತ್ತಮ ಸ್ಥಾನದಲ್ಲಿದೆ.

Story first published: Monday, September 20, 2021, 14:48 [IST]
Other articles published on Sep 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X