KKR vs RCB: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಲಾಗಿತ್ತು.
ಹೀಗೆ ಕೊರೋನಾ ಭೀತಿಯಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಇದೇ ಸೆಪ್ಟೆಂಬರ್ 19ರ ಭಾನುವಾರದಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಮುಂದುವರಿದಿದೆ. ಹೀಗೆ ಸೆಪ್ಟೆಂಬರ್ 19ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ಅಂತರದಿಂದ ಜಯ ಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎರಡನೇ ಭಾಗ ಚೆನ್ನೈ ಮತ್ತು ಮುಂಬೈ ತಂಡಗಳ ನಡುವಿನ ಪಂದ್ಯ ಯಶಸ್ವಿಯಾಗಿ ನಡೆಯುವ ಮೂಲಕ ಪುನರಾರಂಭವಾಗಿದ್ದು ದ್ವಿತೀಯ ಭಾಗದ ಎರಡನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಅಬುಧಾಬಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪಂದ್ಯದ ವಿವರ
ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಸೆಪ್ಟೆಂಬರ್ 20ರ ಸೋಮವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 31ನೇ ಪಂದ್ಯವಾಗಿದೆ.

ಪಿಚ್ ವರದಿ ಮತ್ತು ನೇರ ಪ್ರಸಾರದ ಮಾಹಿತಿ
ಪಿಚ್ ವರದಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.
ನೇರ ಪ್ರಸಾರದ ಮಾಹಿತಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ: ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ ( ನಾಯಕ ), ಎಬಿ ಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್ ವೆಲ್, ರಜತ್ ಪಾಟಿದಾರ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಕೈಲ್ ಜೇಮೀಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಭಮನ್ ಗಿಲ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ ( ನಾಯಕ ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಆಂಡ್ರೆ ರಸೆಲ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ಪ್ರಸಿದ್ಧ್ ಕೃಷ್ಣ, ಲಾಕಿ ಫರ್ಗ್ಯೂಸನ್, ಸಂದೀಪ್ ವಾರಿಯರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications