Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

PBKS vs RR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

 IPL 2021, Match 32, PBKS vs RR Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದ್ದು, ಈ ದ್ವಿತೀಯ ಭಾಗದ ಮೊದಲನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದೆ ಹಾಗೂ ಸೆಪ್ಟೆಂಬರ್ 20ರ ಸೋಮವಾರದಂದು ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ.

ಹೀಗೆ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಯುಎಇ ಚರಣದ ಮೊದಲೆರಡು ಪಂದ್ಯಗಳು ಮುಗಿದ ನಂತರ ಇದೀಗ ಕ್ರಿಕೆಟ್ ಅಭಿಮಾನಿಗಳ ಚಿತ್ತ ಸೆಪ್ಟೆಂಬರ್ 21ರಂದು ದುಬೈನ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದತ್ತ ಇದೆ.

ಪಂದ್ಯದ ವಿವರ:

ಪಂದ್ಯದ ವಿವರ:

ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಸೆಪ್ಟೆಂಬರ್ 21ರ ಮಂಗಳವಾರದಂದು ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಟ ನಡೆಸಲಿವೆ. ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಈ ಪಂದ್ಯ ಆರಂಭವಾಗಲಿದ್ದು, ಇದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 32ನೇ ಪಂದ್ಯವಾಗಿದೆ.

ಪಿಚ್ ವರದಿ ಮತ್ತು ನೇರ ಪ್ರಸಾರದ ಮಾಹಿತಿ

ಪಿಚ್ ವರದಿ ಮತ್ತು ನೇರ ಪ್ರಸಾರದ ಮಾಹಿತಿ

ಪಿಚ್ ವರದಿ:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.


ನೇರಪ್ರಸಾರದ ಮಾಹಿತಿ:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಸಂಭಾವ್ಯ ತಂಡಗಳು:

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಮೊಯಿಸ್ ಹೆನ್ರಿಕ್ಸ್, ಹರಪ್ರೀತ್ ಬ್ರಾರ್, ಆದಿಲ್ ರಶೀದ್, ಮೊಹಮ್ಮದ್ ಶಮಿ, ಮುರುಗನ್ ಅಶ್ವಿನ್ / ರವಿ ಬಿಷ್ಣೋಯಿ ಮತ್ತು ಅರ್ಷದೀಪ್ ಸಿಂಗ್.


ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಯಶಸ್ವಿ ಜೈಸ್ವಾಲ್, ಲಿಯಾಮ್ ಲಿವಿಂಗ್‌ಸ್ಟೋನ್, ಸಂಜು ಸ್ಯಾಮ್ಸನ್ (ನಾಯಕ ಮತ್ತು ವಿಕೆಟ್ ಕೀಪರ್), ರಿಯಾನ್ ಪರಾಗ್, ಶಿವಂ ದುಬೆ, ಡೇವಿಡ್ ಮಿಲ್ಲರ್, ಕ್ರಿಸ್ ಮೋರಿಸ್, ರಾಹುಲ್ ತೆವಟಿಯಾ, ಚೇತನ್ ಸಕಾರಿಯಾ, ಜಯದೇವ್ ಉನದ್ಕಟ್ ಮತ್ತು ತಬ್ರೇಜ್ ಶಮ್ಸಿ

Story first published: Tuesday, September 21, 2021, 15:35 [IST]
Other articles published on Sep 21, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+