DC vs SRH: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ನಾಲ್ಕನೇ ಪಂದ್ಯ ಸೆಪ್ಟೆಂಬರ್ 22ರ ಬುಧವಾರದಂದು ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಇದು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 33ನೇ ಪಂದ್ಯವಾಗಿದೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟೂರ್ನಿಯಲ್ಲಿ ಸಾಲು ಸಾಲು ಸೋಲುಗಳನ್ನು ಅನುಭವಿಸಿ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಕುಸಿದಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಸೆಣಸಾಡಲಿದ್ದು ಪಂದ್ಯ ಆರಂಭವಾಗುವ ಮುನ್ನವೇ ಹಿನ್ನಡೆ ಅನುಭವಿಸಿದೆ. ಹೌದು ಈ ಪಂದ್ಯ ಆರಂಭಕ್ಕೂ ಮುನ್ನ ಸನ್ ರೈಸರ್ಸ್ ಹೈದರಾಬಾದ್ ತಂಡದ ಟಿ ನಟರಾಜನ್ ಸೇರಿ ಒಟ್ಟು 6 ಆಟಗಾರರಿಗೆ ಕೊರೊನಾ ವೈರಸ್ ಪಾಸಿಟಿವ್ ವರದಿ ಬಂದಿದ್ದು ಈ ಆಟಗಾರರನ್ನು ಹೊರತುಪಡಿಸಿ ಉಳಿದ ಆಟಗಾರರು ಪಂದ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿ ಸದ್ಯ ಹೊರಬಿದ್ದಿದೆ.
ಡೆಲ್ಲಿ ಕ್ಯಾಪ್ಟನ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಮುಖಾಮುಖಿ ಪಂದ್ಯಗಳ ಫಲಿತಾಂಶ:
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಒಟ್ಟು 19 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡದ 8 ಪಂದ್ಯಗಳಲ್ಲಿ ಗೆಲುವನ್ನು ತನ್ನದಾಗಿಸಿಕೊಂಡಿದೆ. ಹೀಗೆ ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ನಡೆದಿರುವ ಒಟ್ಟು ಮುಖಾಮುಖಿ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಡೆಲ್ಲಿ ಕ್ಯಾಪ್ಟನ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮುಖಾಮುಖಿ ಫಲಿತಾಂಶ:
ಇನ್ನು ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದವು. ಡೆಲ್ಲಿ ಮತ್ತು ಹೈದರಾಬಾದ್ ತಂಡಗಳ ನಡುವೆ ನಡೆದಿದ್ದ ಈ ಪಂದ್ಯದಲ್ಲಿ ಎರಡೂ ತಂಡಗಳು 159 ರನ್ ಕಲೆ ಹಾಕಿದ ಕಾರಣ ಪಂದ್ಯ ಟೈ ಆಗಿತ್ತು. ಈ ಸಮಯದಲ್ಲಿ ಎರಡೂ ತಂಡಗಳ ನಡುವೆ ಸೂಪರ್ ಓವರ್ ಜರುಗಿತು. ಹೀಗೆ ಸೂಪರ್ ಓವರ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಗೆಲುವನ್ನು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications