KKR vs MI: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ನಡೆಸಲು ಟೂರ್ನಿಯನ್ನು ಇದೀಗ ಯುಎಇಗೆ ಸ್ಥಳಾಂತರಿಸಲಾಗಿದ್ದು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯ ಭಾಗ ಆರಂಭವಾಗಿದೆ. ಹೌದು, ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಆರಂಭವಾಗಿದ್ದು ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಪಂದ್ಯ ಸೆಪ್ಟೆಂಬರ್ 23ರ ಗುರುವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ನಡೆಯಲಿದೆ.
ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ತಲಾ 8 ಪಂದ್ಯಗಳನ್ನಾಡಿರುವ ಈ ಎರಡೂ ತಂಡಗಳಿಗೂ ಇಂದು ( ಸೆಪ್ಟೆಂಬರ್ 23 ) ನಡೆಯಲಿರುವ ಪಂದ್ಯ ಅತಿ ಮುಖ್ಯವಾದ ಪಂದ್ಯವಾಗಿದೆ. ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಫಿಟ್‌ನೆಸ್ ಸಮಸ್ಯೆಯಿಂದ ಹೊರ ಬಿದ್ದಿದ್ದರು. ಇದೀಗ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿಯಲಿದ್ದಾರೆ.
ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಒಟ್ಟಾರೆ ಮುಖಾಮುಖಿ ಪಂದ್ಯಗಳ ಫಲಿತಾಂಶ:
ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ ತಂಡ 22 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 6 ಪಂದ್ಯಗಳಲ್ಲಿ ಮಾತ್ರ ಜಯಗಳಿಸಿದೆ. ಹೀಗೆ ಒಟ್ಟಾರೆ ಮುಖಾಮುಖಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ದೊಡ್ಡ ಮಟ್ಟದ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಫಲಿತಾಂಶ:
ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿರುವ ಕಳೆದ 5 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ತಂಡ 4 ಪಂದ್ಯಗಳನ್ನು ಗೆದ್ದುಕೊಂಡಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ ಒಂದೇ ಒಂದು ಪಂದ್ಯದಲ್ಲಿ ಜಯ ಸಾಧಿಸಿದೆ. ಹೀಗೆ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿಯೂ ಕೂಡ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಮೇಲುಗೈ ಸಾಧಿಸಿದೆ.
ಅಬುಧಾಬಿಯಲ್ಲಿ ಯಾರದ್ದು ಮೇಲುಗೈ?
ಇನ್ನು ಇಂದು ( ಸೆಪ್ಟೆಂಬರ್ 23 ) ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಅಬುಧಾಬಿಯ ಶೈಖ್ ಜಾಯೇದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದಲ್ಲಿ ಇದುವರೆಗೂ ಈ ಎರಡೂ ತಂಡಗಳು 3 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್ ತಂಡ 2 ಪಂದ್ಯಗಳಲ್ಲಿ ಜಯಗಳಿಸಿದ್ದರೆ, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕೇವಲ 1 ಪಂದ್ಯದಲ್ಲಿ ಜಯಗಳಿಸಿದೆ. ಈ ಮೂಲಕ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಇನ್ನು ಭಾರತದಲ್ಲಿ ನಡೆದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಒಂದು ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿಯೂ ಮುಂಬೈ ಇಂಡಿಯನ್ಸ್ ತಂಡ ಗೆಲುವನ್ನು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications