For Quick Alerts
ALLOW NOTIFICATIONS  
For Daily Alerts
 

MI vs KKR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 34, KKR vs MI Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಐದನೇ ಪಂದ್ಯ ಸೆಪ್ಟೆಂಬರ್ 23ರ ಗುರುವಾರ ಅಬುಧಾಬಿಯ ಶೈಖ್ ಝಾಯೆದ್ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಆರಂಭವಾಗಲಿದ್ದು, ಇದು ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯವಾಗಿದೆ.

ಸದ್ಯ ಯುಎಇಯಲ್ಲಿ ಐಪಿಎಲ್ ಪುನಾರಂಭವಾದ ನಂತರ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸೋಲುಂಡಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಜಯವನ್ನು ಸಾಧಿಸಿದೆ. ಇನ್ನು ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿರುವ ಮುಂಬೈ ಇಂಡಿಯನ್ಸ್ 4 ಪಂದ್ಯಗಳಲ್ಲಿ ಜಯ ಸಾಧಿಸಿ, 4 ಪಂದ್ಯಗಳಲ್ಲಿ ಸೋಲುಂಡು 8 ಅಂಕಗಳನ್ನು ಗಳಿಸುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದರೆ, ಅತ್ತ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 8 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಜಯಗಳಿಸಿ, 5 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಇಂದು ( ಸೆಪ್ಟೆಂಬರ್ 23 ) ಅಬುಧಾಬಿಯಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಕುರಿತ ಮಾಹಿತಿ ಈ ಕೆಳಕಂಡಂತಿದೆ ನೋಡಿ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 34ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಸೆಪ್ಟೆಂಬರ್ 23ರ ಗುರುವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.

ನೇರಪ್ರಸಾರದ ಮಾಹಿತಿ:

ಮುಂಬೈ ಇಂಡಿಯನ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡಗಳು: ರೋಹಿತ್ ಶರ್ಮಾ, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್‌), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಕೀರನ್ ಪೊಲ್ಲಾರ್ಡ್, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ರಾಹುಲ್ ಚಹರ್, ಆಡಮ್ ಮಿಲ್ನೆ, ಜಸ್ಪ್ರೀತ್ ಬುಮ್ರಾ ಮತ್ತು ಟ್ರೆಂಟ್ ಬೌಲ್ಟ್.

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಭ್ಮನ್ ಗಿಲ್, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್‌), ಆಂಡ್ರೆ ರಸೆಲ್, ಸುನೀಲ್ ನರೈನ್, ಪ್ರಸಿದ್ಧ್ ಕೃಷ್ಣ, ಲಾಕಿ ಫರ್ಗುಸನ್ ಮತ್ತು ವರುಣ್ ಚಕ್ರವರ್ತಿ

Story first published: Thursday, September 23, 2021, 15:05 [IST]
Other articles published on Sep 23, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+