ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RCB vs CSK: ಮುಖಾಮುಖಿ ಪಂದ್ಯಗಳಲ್ಲಿ ಈ ತಂಡ ತುಂಬಾ ಬಲಿಷ್ಠ!

IPL 2021, Match 35 : CSK vs RCB Head-to-head record details
ಮಿಸ್ಟರ್ ಕೂಲ್ vs ಫೈರ್ ಕಿಂಗ್: ಮೈನಸ್ ಮತ್ತು ಪ್ಲಸ್ ಪಾಯಿಂಟ್? | Oneindia Kannada

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಎಲ್ಲಾ ಪಂದ್ಯಗಳ ಪೈಕಿ ಅತಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಪಂದ್ಯವೆಂದರೆ ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಪಂದ್ಯ. ಹೌದು ಈ ಎರಡು ತಂಡಗಳ ನಡುವಿನ ಪಂದ್ಯವೆಂದರೆ ಸಾಕು ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮತ್ತು ಕುತೂಹಲ ಹುಟ್ಟಿಕೊಂಡುಬಿಡುತ್ತದೆ.

ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್ಐಪಿಎಲ್: ಮಹೇಂದ್ರ ಸಿಂಗ್ ಧೋನಿ ದಾಖಲೆ ಮುರಿದ ದಿನೇಶ್ ಕಾರ್ತಿಕ್

ಅದರಲ್ಲಿಯೂ ಸಾಮಾಜಿಕ ಜಾಲತಾಣಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳ ಬಳಗ ದೊಡ್ಡಮಟ್ಟದಲ್ಲಿದ್ದು ಈ ಎರಡು ತಂಡಗಳು ಮುಖಾಮುಖಿಯಾಗುವ ಪಂದ್ಯದ ದಿನ ಸಾಮಾಜಿಕ ಜಾಲತಾಣಗಳಲ್ಲಿ ಪರಸ್ಪರ ಕಾಲೆಳೆದುಕೊಳ್ಳುತ್ತಾ ಪಂದ್ಯಗಳನ್ನು ವೀಕ್ಷಿಸುತ್ತಾರೆ. ಹೀಗೆ ದೊಡ್ಡ ಮಟ್ಟದ ನಿರೀಕ್ಷೆಯನ್ನು ಸದಾ ಹುಟ್ಟುಹಾಕುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 35ನೇ ಪಂದ್ಯದಲ್ಲಿ ಸೆಣಸಾಡಲಿದ್ದು, ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್'ದಾಖಲೆ ಮಾಡಿಬಿಟ್ರೆ ಆಗಲ್ಲ, ಪಂದ್ಯದ ದಿನ ಚೆನ್ನಾಗಿ ಆಡಬೇಕು'; ದಾಖಲೆ ಎನ್ನುವವರಿಗೆ ಕುಟುಕಿದ ರೋಹಿತ್

ಇನ್ನು ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲನೇ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಿತು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವನ್ನು ಸಾಧಿಸಿದೆ. ಇತ್ತ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 92 ರನ್‌ಗಳಿಗೆ ಆಲ್ ಔಟ್ ಆಗುವ ಮೂಲಕ ಹೀನಾಯ ಸೋಲನ್ನು ಅನುಭವಿಸಿದೆ. ಇನ್ನು ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೂ ತಲಾ 8 ಪಂದ್ಯಗಳನ್ನಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಪಂದ್ಯಗಳಲ್ಲಿ ಜಯಗಳಿಸಿ 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, 5 ಪಂದ್ಯಗಳನ್ನು ಗೆದ್ದು 10 ಅಂಕಗಳನ್ನು ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ.

ಇನ್ನು ಈ ಎರಡೂ ತಂಡಗಳ ಮುಖಾಮುಖಿ ಪಂದ್ಯಗಳಲ್ಲಿ ಯಾರು ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೆ ಮತ್ತು ಯಾರು ಹೆಚ್ಚು ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿದ್ದಾರೆ ಎಂಬುದರ ವಿವರ ಈ ಕೆಳಕಂಡಂತಿದೆ ಓದಿ..

ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಒಟ್ಟು 28 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 18 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ ಹಾಗೂ ಒಂದು ಪಂದ್ಯ ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ. ಹೀಗೆ ಬೆಂಗಳೂರು ಮತ್ತು ಚೆನ್ನೈ ತಂಡಗಳ ನಡುವಿನ ಒಟ್ಟಾರೆ ಮುಖಾಮುಖಿ ಪಂದ್ಯಗಳ ಫಲಿತಾಂಶದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸ್ಪಷ್ಟವಾದ ದೊಡ್ಡ ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳ ಮುಖಾಮುಖಿಯ ಅಂಕಿ ಅಂಶ

ಕೊನೆಯ 5 ಪಂದ್ಯಗಳ ಮುಖಾಮುಖಿಯ ಅಂಕಿ ಅಂಶ

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಹೀಗೆ ಉಭಯ ತಂಡಗಳ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ತಂಡ ಮೇಲುಗೈ ಸಾಧಿಸಿದೆ.

ಪಂದ್ಯದ ವಿವರ:

ಪಂದ್ಯದ ವಿವರ:

ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 24ರ ಶುಕ್ರವಾರದಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು ಈ ಪಂದ್ಯವು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ ಮತ್ತು ಇದು ಟೂರ್ನಿಯ 35ನೇ ಪಂದ್ಯವಾಗಿದೆ.

Story first published: Friday, September 24, 2021, 12:39 [IST]
Other articles published on Sep 24, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X