RCB vs CSK: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಆರನೇ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 24ರ ಶುಕ್ರವಾರದಂದು ಸಂಜೆ 7.30ಕ್ಕೆ ಆರಂಭವಾಗಲಿದ್ದು, ಇದು ಪ್ರಸ್ತುತ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 35ನೇ ಪಂದ್ಯವಾಗಿದೆ.
ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಮೊದಲನೇ ಪಂದ್ಯವನ್ನು ಇತ್ತೀಚೆಗಷ್ಟೇ ಮುಂಬೈ ಇಂಡಿಯನ್ಸ್ ವಿರುದ್ಧ ಆಡಿ ಜಯಗಳಿಸಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಸ್ತುತ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದ ತನ್ನ ಮೊದಲನೇ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಿ ಸೋಲನ್ನು ಕಂಡಿದೆ. ಇನ್ನು ಟೂರ್ನಿಯಲ್ಲಿ ಉಭಯ ತಂಡಗಳು ಇದುವರೆಗೂ ತಲಾ 8 ಪಂದ್ಯಗಳನ್ನಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ಪಂದ್ಯಗಳಲ್ಲಿ ಜಯಗಳಿಸಿ 12 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, 5 ಪಂದ್ಯಗಳನ್ನು ಗೆದ್ದು 10 ಅಂಕಗಳನ್ನು ಪಡೆದುಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯದ ವಿವರಗಳು ಈ ಕೆಳಕಂಡಂತಿವೆ ನೋಡಿ..

ಪಂದ್ಯದ ವಿವರ:
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 35ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸೆಪ್ಟೆಂಬರ್ 24ರ ಶುಕ್ರವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ, ನೇರಪ್ರಸಾರದ ಮಾಹಿತಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.
ನೇರಪ್ರಸಾರದ ಮಾಹಿತಿ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಂಭಾವ್ಯ ತಂಡ: ವಿರಾಟ್ ಕೊಹ್ಲಿ ( ನಾಯಕ ), ದೇವದತ್ ಪಡಿಕ್ಕಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಎಬಿ ಡಿ ವಿಲಿಯರ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಟಿಮ್ ಡೇವಿಡ್/ಸಚಿನ್ ಬೇಬಿ, ವಾನಿಂದು ಹಸರಂಗ, ಹರ್ಷಲ್ ಪಟೇಲ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್ ಸಿರಾಜ್ ಮತ್ತು ಕೈಲ್ ಜೇಮೀಸನ್/ನವದೀಪ್ ಸೈನಿ.
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಎಂಎಸ್ ಧೋನಿ (ನಾಯಕ ಮತ್ತು ವಿಕೆಟ್ ಕೀಪರ್), ಅಂಬಟಿ ರಾಯುಡು, ಸ್ಯಾಮ್ ಕರನ್, ಡ್ವೇನ್ ಬ್ರಾವೋ, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್ ಮತ್ತು ರವೀಂದ್ರ ಜಡೇಜಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications