DC vs RR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 25ರ ಶನಿವಾರದಂದು ಮಧ್ಯಾಹ್ನ 3.30ಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಇನ್ನು ಪ್ರಸ್ತುತ ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಿಷಭ್ ಪಂತ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ 9 ಪಂದ್ಯಗಳನ್ನಾಡಿದ್ದು 7 ಪಂದ್ಯಗಳಲ್ಲಿ ಜಯಗಳಿಸಿ, 2 ಪಂದ್ಯಗಳಲ್ಲಿ ಸೋತಿದ್ದು 14 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಅತ್ತ ಪ್ರಸ್ತುತ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 8 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಜಯಗಳಿಸಿ, 4 ಪಂದ್ಯಗಳಲ್ಲಿ ಸೋಲನುಭವಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ ಐದನೇ ಸ್ಥಾನದಲ್ಲಿದೆ.
ಹೀಗೆ ರಾಜಸ್ಥಾನ್ ರಾಯಲ್ಸ್ ತಂಡ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೆಪ್ಟೆಂಬರ್ 25ರ ಶನಿವಾರದಂದು ನಡೆಯಲಿರುವ ಪಂದ್ಯದಲ್ಲಿ ಎದುರಿಸಲಿದ್ದು, ಅ ಪಂದ್ಯದ ವಿವರಗಳು ಈ ಕೆಳಕಂಡಂತಿವೆ ನೋಡಿ..
ಪಂದ್ಯದ ವಿವರ:
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 36ನೇ ಪಂದ್ಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಸೆಪ್ಟೆಂಬರ್ 25ರ ಶನಿವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.
ಪಿಚ್ ವರದಿ:
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.
ನೇರಪ್ರಸಾರದ ಮಾಹಿತಿ:
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೊಲ್ಕತ್ತಾ ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಸಂಭಾವ್ಯ ತಂಡಗಳು
ಡೆಲ್ಲಿ ಸಂಭಾವ್ಯ ತಂಡ: ಶಿಖರ್ ಧವನ್, ಪೃಥ್ವಿ ಶಾ, ಶ್ರೇಯಸ್ ಐಯ್ಯರ್, ರಿಷಭ್ ಪಂತ್ (ನಾಯಕ ಮತ್ತು ವಿಕಟ್ ಕೀಪರ್), ಮಾರ್ಕಸ್ ಸ್ಟೊಯಿನಿಸ್, ಶಿಮ್ರಾನ್ ಹೆಟ್ಮೀರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅವೇಶ್ ಖಾನ್, ಅನ್ರಿಚ್ ನೋರ್ಕಿಯಾ
ರಾಜಸ್ಥಾನ್ ಸಂಭಾವ್ಯ ತಂಡ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ( ನಾಯಕ ಮತ್ತು ವಿಕೆಟ್ ಕೀಪರ್ ), ಮಹಿಪಾಲ್ ಲೊಮರ್, ಲಿಯಾಮ್ ಲಿವಿಂಗ್‌ಸ್ಟನ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ, ಮುಸ್ತಫಿಜುರ್ ರಹಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications