PBKS vs SRH: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 25ರ ಶನಿವಾರದಂದು ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಶಾರ್ಜಾ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸದ್ಯ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿವೆ. ಟೂರ್ನಿಯಲ್ಲಿ ಇದುವರೆಗೂ 9 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯಗಳಿಸಿ, 6 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದ್ದರೆ, 8 ಪಂದ್ಯಗಳನ್ನಾಡಿ, 7 ಪಂದ್ಯಗಳಲ್ಲಿ ಸೋತು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಇನ್ನು ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳ ಫಲಿತಾಂಶ ಈ ಕೆಳಕಂಡಂತಿದೆ.
ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 17 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 5 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಹೀಗೆ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಒಟ್ಟಾರೆ ಮುಖಾಮುಖಿ ಪಂದ್ಯಗಳ ಫಲಿತಾಂಶದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಸ್ಪಷ್ಟವಾದ ದೊಡ್ಡ ಮೇಲುಗೈ ಸಾಧಿಸಿದೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲ ಭಾಗದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 9 ವಿಕೆಟ್‍ಗಳ ಅಂತರದಿಂದ ಜಯಗಳಿಸಿತ್ತು.
ಸಂಭಾವ್ಯ ತಂಡಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್ / ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.
ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್ ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಕ್ರಿಸ್ ಜೋರ್ಡಾನ್, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications