PBKS vs SRH: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 25ರ ಶನಿವಾರದಂದು ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಶಾರ್ಜಾ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸದ್ಯ ಅಂಕಪಟ್ಟಿಯಲ್ಲಿ ಕೊನೆಯ 2 ಸ್ಥಾನಗಳನ್ನು ಪಡೆದುಕೊಂಡಿವೆ. ಟೂರ್ನಿಯಲ್ಲಿ ಇದುವರೆಗೂ 9 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯಗಳಿಸಿ, 6 ಪಂದ್ಯಗಳಲ್ಲಿ ಸೋತು 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನ ಪಡೆದುಕೊಂಡಿದ್ದರೆ, 8 ಪಂದ್ಯಗಳನ್ನಾಡಿ, 7 ಪಂದ್ಯಗಳಲ್ಲಿ ಸೋತು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಪಂದ್ಯದ ವಿವರ:
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 37ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಸೆಪ್ಟೆಂಬರ್ 25ರ ಶನಿವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.
ಪಿಚ್ ವರದಿ:
ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.
ನೇರಪ್ರಸಾರದ ಮಾಹಿತಿ:
ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಸಂಭಾವ್ಯ ತಂಡಗಳು:
ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಮನೀಶ್ ಪಾಂಡೆ, ಕೇದಾರ್ ಜಾಧವ್ / ಅಭಿಷೇಕ್ ಶರ್ಮಾ, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್.
ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್ (ನಾಯಕ & ವಿಕೆಟ್ ಕೀಪರ್ ), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ಕ್ರಿಸ್ ಜೋರ್ಡಾನ್, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications