RR vs SRH: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 27ರ ಸೋಮವಾರದಂದು ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ದುಬೈ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸದ್ಯ ಅಂಕಪಟ್ಟಿಯಲ್ಲಿ ಕ್ರಮವಾಗಿ 6 ಮತ್ತು ಕೊನೆಯ ಸ್ಥಾನಗಳನ್ನು ಪಡೆದುಕೊಂಡಿವೆ. ಟೂರ್ನಿಯಲ್ಲಿ ಇದುವರೆಗೂ 9 ಪಂದ್ಯಗಳನ್ನಾಡಿರುವ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ತಂಡ 4 ಪಂದ್ಯಗಳಲ್ಲಿ ಜಯಗಳಿಸಿ, 5 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದರೆ, 9 ಪಂದ್ಯಗಳನ್ನಾಡಿ, 8 ಪಂದ್ಯಗಳಲ್ಲಿ ಸೋತು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಇನ್ನು ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳ ಫಲಿತಾಂಶ ಈ ಕೆಳಕಂಡಂತಿದೆ.
ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಒಟ್ಟು 14 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡ 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ ಕೂಡ 7 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಹೀಗೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಒಟ್ಟಾರೆ ಮುಖಾಮುಖಿ ಪಂದ್ಯಗಳ ಫಲಿತಾಂಶದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತು ರಾಜಸ್ಥಾನ್ ರಾಯಲ್ಸ್ ತಂಡ ಸಮಬಲ ಸಾಧಿಸಿವೆ.
ದುಬೈ ಕ್ರೀಡಾಂಗಣದಲ್ಲಿ ಯಾರದ್ದು ಮೇಲುಗೈ?
ಇನ್ನು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ದುಬೈ ಕ್ರೀಡಾಂಗಣದಲ್ಲಿ ನಡೆದಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಒಟ್ಟು 2 ಮುಖಾಮುಖಿ ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ ಒಂದೊಂದು ಪಂದ್ಯದಲ್ಲಿ ಜಯ ಸಾಧಿಸಿ ಸಮಬಲವನ್ನು ಕಾಯ್ದುಕೊಂಡಿವೆ.
ಈ ಬಾರಿಯ ಟೂರ್ನಿಯ ಮುಖಾಮುಖಿಯ ಫಲಿತಾಂಶ
ಇನ್ನು ಸದ್ಯ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಎರಡೂ ತಂಡಗಳ ನಡುವೆ ನಡೆದಿರುವ ಪಂದ್ಯವೊಂದರಲ್ಲಿ ರಾಜಸ್ತಾನ್ ರಾಯಲ್ಸ್ ಗೆಲುವು ಸಾಧಿಸಿದೆ.
ಪಂದ್ಯದ ವಿವರ:
ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಸೆಪ್ಟೆಂಬರ್ 27ರ ಸೋಮವಾರದಂದು ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಲಿವೆ. ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಆರಂಭವಾಗಲಿದ್ದು, ಇದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 40ನೇ ಪಂದ್ಯವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications