ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

RR vs SRH: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

 IPL 2021, Match 40, RR vs SRH Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 27ರ ಸೋಮವಾರದಂದು ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ದುಬೈ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸದ್ಯ ಅಂಕಪಟ್ಟಿಯಲ್ಲಿ ಕ್ರಮವಾಗಿ 6 ಮತ್ತು ಕೊನೆಯ ಸ್ಥಾನಗಳನ್ನು ಪಡೆದುಕೊಂಡಿವೆ. ಟೂರ್ನಿಯಲ್ಲಿ ಇದುವರೆಗೂ 9 ಪಂದ್ಯಗಳನ್ನಾಡಿರುವ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ್ ತಂಡ 4 ಪಂದ್ಯಗಳಲ್ಲಿ ಜಯಗಳಿಸಿ, 5 ಪಂದ್ಯಗಳಲ್ಲಿ ಸೋತು 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿದ್ದರೆ, 9 ಪಂದ್ಯಗಳನ್ನಾಡಿ, 8 ಪಂದ್ಯಗಳಲ್ಲಿ ಸೋತು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯ ಗಳಿಸಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.

ಪಂದ್ಯದ ವಿವರ:

ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಸೆಪ್ಟೆಂಬರ್ 27ರ ಸೋಮವಾರದಂದು ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಟ ನಡೆಸಲಿವೆ. ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಆರಂಭವಾಗಲಿದ್ದು, ಇದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 40ನೇ ಪಂದ್ಯವಾಗಿದೆ.

ಪಿಚ್‌ ವರದಿ:

ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

ನೇರಪ್ರಸಾರದ ಮಾಹಿತಿ:

ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ:
ಡೇವಿಡ್ ವಾರ್ನರ್, ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್‌), ಮನೀಶ್ ಪಾಂಡೆ, ಕೇನ್ ವಿಲಿಯಮ್ಸನ್ (ನಾಯಕ), ಕೇದಾರ್ ಜಾಧವ್, ಜೇಸನ್ ಹೋಲ್ಡರ್, ಅಬ್ದುಲ್ ಸಮದ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಖಲೀಲ್ ಅಹ್ಮದ್

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ:
ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ( ವಿಕೆಟ್ ಕೀಪರ್ ), ಡೇವಿಡ್ ಮಿಲ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಮಹಿಪಾಲ್ ಲೊಮರ್, ರಿಯಾನ್ ಪರಾಗ್, ರಾಹುಲ್ ತೇವತಿಯಾ, ಚೇತನ್ ಸಕಾರಿಯಾ, ಕಾರ್ತಿಕ್ ತ್ಯಾಗಿ, ಮುಸ್ತಫಿಜುರ್ ರಹಮಾನ್, ತಬ್ರೇಜ್ ಶಮ್ಸಿ

Story first published: Monday, September 27, 2021, 16:08 [IST]
Other articles published on Sep 27, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X