ಐಪಿಎಲ್ 2021: ಡಿಸಿ vs ಕೆಕೆಆರ್, ಟಾಸ್ ರಿಪೋರ್ಟ್, Live ಸ್ಕೋರ್, ಪ್ಲೇಯಿಂಗ್ XI

ಐಪಿಎಲ್‌ನಲ್ಲಿ ಇಂದು ಎರಡು ಹಣಾಹಣಿ ನಡೆಯಲಿದೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಕೆಕೆಆರ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

1
50847

ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಪ್ರಸಿದ್ಧ್ ಕೃಷ್ಣ ಆಡುವ ಬಳಗದಿಂದ ಹೊರಗುಳಿದಿದ್ದು ಅವರ ಸ್ಥಾನಕ್ಕೆ ಸಂದೀಪ್ ವಾರಿಯರ್ ಕಾಣಿಸಿಕೊಂಡಿದ್ದಾರೆ. ಆಲ್‌ರೌಂಡರ್ ಆಂಡ್ರೆ ರಸೆಲ್ ಕೂಡ ಗಾಯದ ಕಾರಣಕ್ಕೆ ಹೊರಗುಳಿದಿದ್ದು ಟಿಮ್ ಸೌಥಿ ತಂಡಕ್ಕೆ ಸೇರಿಕೊಂಡಿದ್ದಾರೆ.

ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೂಡ ಒಂದು ಬದಲಾವಣೆಯನ್ನು ಮಾಡಿಕೊಂಡಿದೆ. ಯುವ ಆರಂಭಿಕ ಆಟಗಾರ ಪೃಥ್ವಿ ಶಾ ಗಾಯಗೊಂಡಿದ್ದು ಆಡುವ ಬಳಗದಿಮದ ಹೊರಗುಳಿದಿದ್ದರೆ ಅವರ ಸ್ಥಾನಕ್ಕೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಆಯ್ಕೆಯಾಗಿದ್ದು ಆರಂಭಿಕನಾಗಿ ಶಿಖರ್ ಧವನ್‌ಗೆ ಸಾಥ್ ನೀಡಲಿದ್ದಾರೆ.

1
50847

ಇನ್ನು ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದೆ. ಆಡಿರುವ 10 ಪಂದ್ಯಗಳ ಪೈಕಿ ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯಗಳ ಪೈಕಿ ಡೆಲ್ಲಿ 8ರಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ತನ್ನ ಅದ್ಭುತ ಪ್ರದರ್ಶನವನ್ನು ಈ ಪಂದ್ಯದಲ್ಲಿಯೂ ಮುಂದುವರಿಸುವ ಆತ್ಮವಿಶ್ವಾಸದಲ್ಲಿದೆ. ಮತ್ತೊಂದೆಡೆ ಕೆಕೆಆರ್ ತಂಡ ಮೊದಲ ಚರಣದ ಪಂದ್ಯದಲ್ಲಿ ಕಳಪೆ ಪ್ರದರ್ಶನ ನಿಡಿದ ಬಳಿಕ ಎರಡನೇ ಚರಣದಲ್ಲಿ ಅದ್ಭುತವಾಗಿ ಕಮ್‌ಬ್ಯಾಕ್ ಮಾಡಿದ್ದು ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

1
4-2021

ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ XI: ಶುಬ್ಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನಿಲ್ ನರೈನ್, ಲಾಕಿ ಫರ್ಗುಸನ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಸಂದೀಪ್ ವಾರಿಯರ್
ಬೆಂಚ್: ಹರ್ಭಜನ್ ಸಿಂಗ್, ಶಕೀಬ್ ಅಲ್ ಹಸನ್, ಬೆನ್ ಕಟಿಂಗ್, ಕರುಣ್ ನಾಯರ್, ಪವನ್ ನೇಗಿ, ಕುಲದೀಪ್ ಯಾದವ್, ಗುರ್ಕೀರತ್ ಸಿಂಗ್ ಮಾನ್, ಶೆಲ್ಡನ್ ಜಾಕ್ಸನ್, ಟಿಮ್ ಸೀಫರ್ಟ್, ರಿಂಕು ಸಿಂಗ್, ಕಮಲೇಶ್ ನಾಗರಕೋಟಿ, ಶಿವಂ ಮಾವಿ, ವೈಭವ್ ಅರೋರಾ, ಪ್ರಸಿದ್ ಕೃಷ್ಣ, ಆಂಡ್ರೆ ರಸೆಲ್

David Warner ಪರಿಸ್ಥಿತಿ ನೋಡಿ ನೊಂದ ಅಭಿಮಾನಿಗಳು | Oneindia Kannada

ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ ‍XI: ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್/ ನಾಯಕ ), ಶಿಮ್ರಾನ್ ಹೆಟ್ಮೀರ್, ಲಲಿತ್ ಯಾದವ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನಾರ್ಕಿಯಾ, ಆವೇಶ್ ಖಾನ್
ಬೆಂಚ್: ಇಶಾಂತ್ ಶರ್ಮಾ, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಉಮೇಶ್ ಯಾದವ್, ಸ್ಯಾಮ್ ಬಿಲ್ಲಿಂಗ್ಸ್, ಮಾರ್ಕಸ್ ಸ್ಟೋಯಿನಿಸ್, ಲುಕ್ಮಾನ್ ಮೇರಿವಾಲಾ, ಟಾಮ್ ಕುರ್ರನ್, ಬೆನ್ ದ್ವಾರಶುಯಿಸ್, ಪ್ರವೀಣ್ ದುಬೆ, ವಿಷ್ಣು ವಿನೋದ್, ಕುಲ್ವಂತ್ ಖೇಜ್ರೋಲಿಯಾ, ರಿಪಾಲ್ ಪಟೇಲ್, ಪೃಥ್ವಿ ಶಾ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 5 - October 19 2021, 03:30 PM
ಸ್ಕಾಟ್ಲೆಂಡ್
ಪಪುವಾ ನ್ಯೂ ಗಿನಿವಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Tuesday, September 28, 2021, 15:18 [IST]
Other articles published on Sep 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X