ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

MI vs PBKS: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

IPL 2021, Match 42 : MI vs PBKS Head-to-head record details

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 28ರ ಮಂಗಳವಾರದಂದು ಸಂಜೆ 7.30ಕ್ಕೆ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಅಬುಧಾಬಿಯ ಶೈಖ್ ಜಾಯೇದ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದರೆ, ಮುಂಬೈ ಇಂಡಿಯನ್ಸ್ ತಂಡ ಏಳನೇ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಇದುವರೆಗೂ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಕೂಡ ತಲಾ 10 ಪಂದ್ಯಗಳನ್ನಾಡಿದ್ದು, ಎರಡೂ ತಂಡಗಳು ತಲಾ 4 ಪಂದ್ಯಗಳಲ್ಲಿ ಜಯಗಳಿಸಿವೆ ಹಾಗೂ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿವೆ.

ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!ಆರ್‌ಸಿಬಿಯ ಈ ಸ್ಟಾರ್ ಬ್ಯಾಟ್ಸ್‌ಮನ್‌ಗೆ ಕೃನಾಲ್ ಪಾಂಡ್ಯ ಎದುರಿಸುವ ಧೈರ್ಯ ಇಲ್ಲ ಎಂದ ಮಾಜಿ ಕ್ರಿಕೆಟಿಗ!

ಹೀಗೆ ಟೂರ್ನಿಯಲ್ಲಿ ಗೆಲುವಿಗಿಂತ ಸೋಲನ್ನೇ ಹೆಚ್ಚಾಗಿ ಕಂಡಿರುವ ಈ ಎರಡೂ ತಂಡಗಳು ಕೂಡ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಉಳಿದ ಪಂದ್ಯಗಳನ್ನು ಹೆಚ್ಚಾಗಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದ್ದು, ಇಂದು ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯ ಇತ್ತಂಡಗಳಿಗೆ ಬಹುಮುಖ್ಯದ್ದಾಗಿದೆ. ಹೀಗಾಗಿ ಇಂದು ನಡೆಯಲಿರುವ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಈ ಪಂದ್ಯ ಮಹತ್ವದ್ದಾಗಿರಲಿದ್ದು ದೊಡ್ಡ ಮಟ್ಟದ ಪೈಪೋಟಿಯನ್ನು ನಿರೀಕ್ಷಿಸಬಹುದು.

ಇನ್ನು ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಮುಖಾಮುಖಿ ಪಂದ್ಯಗಳ ಫಲಿತಾಂಶ ಈ ಕೆಳಕಂಡಂತಿದೆ.

ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 14 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಹೀಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ಒಂದೇ ಒಂದು ಅಧಿಕ ಪಂದ್ಯದಲ್ಲಿ ಜಯ ಸಾಧಿಸಿ ಒಟ್ಟಾರೆ ಮುಖಾಮುಖಿ ಪಂದ್ಯಗಳಲ್ಲಿ ಮುನ್ನಡೆಯಲ್ಲಿದೆ.

'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್'ನಮ್ಮಿಂದ ಆಗುತ್ತಿಲ್ಲ'; ಬೆಂಗಳೂರು ವಿರುದ್ಧದ ಹೀನಾಯ ಸೋಲಿಗೆ ಕಾರಣ ಯಾರೆಂಬುದನ್ನು ಬಿಚ್ಚಿಟ್ಟ ರೋಹಿತ್

ಅಬುಧಾಬಿಯ ಕ್ರೀಡಾಂಗಣದಲ್ಲಿ ಯಾರದ್ದು ಮೇಲುಗೈ?

ಇನ್ನು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಅಬುಧಾಬಿಯ ಶೈಖ್ ಜಾಯೇದ್ ಕ್ರೀಡಾಂಗಣದಲ್ಲಿ ನಡೆದಿರುವ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯವೊಂದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯಗಳಿಸಿದ್ದು ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳಲ್ಲಿ ಯಾರದ್ದು ಮೇಲುಗೈ?

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ 3 ಪಂದ್ಯಗಳಲ್ಲಿ ಗೆಲುವನ್ನು ಪಡೆದುಕೊಳ್ಳುವುದರ ಮೂಲಕ ಮೇಲುಗೈ ಸಾಧಿಸಿದೆ.

ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದವರಾರು?

ಈ ವರ್ಷ ಏಪ್ರಿಲ್ ತಿಂಗಳಿನಲ್ಲಿ ಭಾರತ ನೆಲದಲ್ಲಿ ನಡೆದಿದ್ದ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪಂದ್ಯವೊಂದರಲ್ಲಿ ಭಾಗವಹಿಸಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿತ್ತು.

Story first published: Tuesday, September 28, 2021, 17:27 [IST]
Other articles published on Sep 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X