For Quick Alerts
ALLOW NOTIFICATIONS  
For Daily Alerts
 

MI vs PBKS: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 42, MI vs PBKS Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 28ರ ಮಂಗಳವಾರದಂದು ಸಂಜೆ 7.30ಕ್ಕೆ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪಂಜಾಬ್ ಕಿಂಗ್ಸ್ ತಂಡ ಸದ್ಯ ಅಂಕಪಟ್ಟಿಯಲ್ಲಿ 6ನೇ ಸ್ಥಾನ ಪಡೆದುಕೊಂಡಿದ್ದರೆ, ಮುಂಬೈ ಇಂಡಿಯನ್ಸ್ ತಂಡ ಏಳನೇ ಸ್ಥಾನದಲ್ಲಿದೆ. ಟೂರ್ನಿಯಲ್ಲಿ ಇದುವರೆಗೂ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಕೂಡ ತಲಾ 10 ಪಂದ್ಯಗಳನ್ನಾಡಿದ್ದು, ಎರಡೂ ತಂಡಗಳು ತಲಾ 4 ಪಂದ್ಯಗಳಲ್ಲಿ ಜಯಗಳಿಸಿವೆ ಹಾಗೂ 6 ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿವೆ.

ಹೀಗೆ ಎರಡೂ ತಂಡಗಳು ಸಹ ಟೂರ್ನಿಯಲ್ಲಿ ಇದುವರೆಗೂ ಗೆಲುವಿಗಿಂತ ಸೋಲನ್ನೇ ಹೆಚ್ಚು ಅನುಭವಿಸಿದ್ದು, ಉಳಿದಿರುವ ಪಂದ್ಯಗಳಲ್ಲಿ ಹೆಚ್ಚು ಗೆಲುವನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಹಂತವನ್ನು ಪ್ರವೇಶಿಸುವ ಯೋಜನೆಯಲ್ಲಿವೆ. ಹೀಗಾಗಿ ಈ ಎರಡೂ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 42ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಸೆಪ್ಟೆಂಬರ್ 28ರ ಮಂಗಳವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.

ನೇರಪ್ರಸಾರದ ಮಾಹಿತಿ:

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು

ಮುಂಬೈ ಇಂಡಿಯನ್ಸ್ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೀರನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ, ಜಿಮ್ಮಿ ನೀಶಮ್, ಅನುಕುಲ್ ರಾಯ್, ರಾಹುಲ್ ಚಾಹರ್, ಜಸ್ಪ್ರೀತ್ ಬುಮ್ರಾ ಮತ್ತು ಟ್ರೆಂಟ್ ಬೌಲ್ಟ್

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್ (ವಿಕೆಟ್ ಕೀಪರ್ / ನಾಯಕ ), ಮಯಾಂಕ್ ಅಗರ್ವಾಲ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ಹರಪ್ರೀತ್ ಬ್ರಾರ್, ಅರ್ಷದೀಪ್ ಸಿಂಗ್ ಮತ್ತು ನಾಥನ್ ಎಲ್ಲಿಸ್

Story first published: Tuesday, September 28, 2021, 17:27 [IST]
Other articles published on Sep 28, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+