Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಮುಂಬೈ ಇಂಡಿಯನ್ಸ್ vs ಪಂಜಾಬ್ ಕಿಂಗ್ಸ್‌, ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

IPL 2021, Match 42: MI vs PBKS, Toss Report, Live Score and playing XI

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ( ಸೆಪ್ಟೆಂಬರ್ 28 ) ಎರಡು ಪಂದ್ಯಗಳನ್ನು ಆಯೋಜಿಸಲಾಗಿದ್ದು ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳು ಸೆಣಸಾಡುತ್ತಿವೆ.

ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 42ನೇ ಪಂದ್ಯವಾಗಿದೆ.

ಟಾಸ್ ವರದಿ:

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಪಂಜಾಬ್ ಕಿಂಗ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

1
50864

ಆಡುವ ಬಳಗ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ ( ನಾಯಕ ), ಕ್ವಿಂಟನ್ ಡಿ ಕಾಕ್ ( ವಿಕೆಟ್ ಕೀಪರ್ ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲ್ಲಾರ್ಡ್, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

ಪಂಜಾಬ್ ಕಿಂಗ್ಸ್ ಆಡುವ ಬಳಗ: ಕೆಎಲ್ ರಾಹುಲ್ ( ವಿಕೆಟ್ ಕೀಪರ್ / ನಾಯಕ), ಮನ್ ದೀಪ್ ಸಿಂಗ್, ಕ್ರಿಸ್ ಗೇಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಹರ್ ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಈ ಪಂದ್ಯದ ಲೈವ್ ಸ್ಕೋರ್ ಮುಂದಿದೆ..

ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಒಟ್ಟು 27 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಮುಂಬೈ ಇಂಡಿಯನ್ಸ್ ತಂಡ 14 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ ತಂಡ 13 ಪಂದ್ಯಗಳಲ್ಲಿ ಗೆಲುವು ಪಡೆದುಕೊಂಡಿದೆ. ಹೀಗೆ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಕ್ಕಿಂತ ಒಂದೇ ಒಂದು ಅಧಿಕ ಪಂದ್ಯದಲ್ಲಿ ಜಯ ಸಾಧಿಸಿ ಒಟ್ಟಾರೆ ಮುಖಾಮುಖಿ ಪಂದ್ಯಗಳಲ್ಲಿ ಮುನ್ನಡೆಯಲ್ಲಿದೆ.

ಅಬುಧಾಬಿಯ ಕ್ರೀಡಾಂಗಣದಲ್ಲಿ ಯಾರದ್ದು ಮೇಲುಗೈ?

ಇನ್ನು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಅಬುಧಾಬಿಯ ಶೈಖ್ ಜಾಯೇದ್ ಕ್ರೀಡಾಂಗಣದಲ್ಲಿ ನಡೆದಿರುವ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯವೊಂದರಲ್ಲಿ ಮುಂಬೈ ಇಂಡಿಯನ್ಸ್ ತಂಡ ಜಯಗಳಿಸಿದ್ದು ಮೇಲುಗೈ ಸಾಧಿಸಿದೆ.

ಕೊನೆಯ 5 ಪಂದ್ಯಗಳಲ್ಲಿ ಯಾರದ್ದು ಮೇಲುಗೈ?

ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ 3 ಪಂದ್ಯಗಳಲ್ಲಿ ಗೆಲುವನ್ನು ಪಡೆದುಕೊಳ್ಳುವುದರ ಮೂಲಕ ಮೇಲುಗೈ ಸಾಧಿಸಿದೆ.

ಈ ಬಾರಿಯ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದವರಾರು?

ಈ ವರ್ಷ ಏಪ್ರಿಲ್ ತಿಂಗಳಿನಲ್ಲಿ ಭಾರತ ನೆಲದಲ್ಲಿ ನಡೆದಿದ್ದ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಮೊದಲಾರ್ಧದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಪಂದ್ಯವೊಂದರಲ್ಲಿ ಭಾಗವಹಿಸಿದ್ದವು. ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್ ತಂಡಕ್ಕೆ ಸೋಲುಣಿಸಿತ್ತು.

Story first published: Tuesday, September 28, 2021, 19:27 [IST]
Other articles published on Sep 28, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+