For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021, RCB vs RR: ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

IPL 2021, Match 43: RCB vs RR, Toss Report, Live Score and playing XI

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 43ನೇ ಪಂದ್ಯ ಇಂದು ( ಸೆಪ್ಟೆಂಬರ್ 29 ) ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ತಾನ್ ರಾಯಲ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದುವರೆಗೂ ಒಟ್ಟು 10 ಪಂದ್ಯಗಳನ್ನಾಡಿದ್ದು 6 ಪಂದ್ಯಗಳಲ್ಲಿ ಜಯಗಳಿಸಿ, 4 ಪಂದ್ಯಗಳಲ್ಲಿ ಸೋಲುವುದರ ಮೂಲಕ 12 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ. ಅತ್ತ ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ತಾನ್ ರಾಯಲ್ಸ್ ತಂಡ 10 ಪಂದ್ಯಗಳನ್ನಾಡಿದ್ದು 4 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲುವುದರ ಮೂಲಕ 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಹೀಗೆ ಇಂದಿನ ಪಂದ್ಯದಲ್ಲಿ ಗೆಲುವನ್ನು ಪಡೆದುಕೊಳ್ಳುವುದರ ಮೂಲಕ ಪ್ಲೇ ಆಫ್ ಹಂತದ ಪ್ರವೇಶಕ್ಕೆ ಸನಿಹವಾಗುವತ್ತ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣ್ಣಿಟ್ಟಿದ್ದರೆ, ಪ್ಲೇ ಆಫ್ ಹಂತವನ್ನು ಪ್ರವೇಶಿಸಬೇಕೆಂದರೆ ತನ್ನ ಉಳಿದೆಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿರುವ ರಾಜಸ್ತಾನ್ ರಾಯಲ್ಸ್ ಕೂಡ ಗೆಲುವಿನ ತವಕದಲ್ಲಿದೆ. ಹೀಗೆ ಈ ಎರಡೂ ತಂಡಗಳ ನಡುವೆ ದುಬೈ ಕ್ರೀಡಾಂಗಣದಲ್ಲಿ ನಡೆಯಲಿರುವ ಇಂದಿನ ಪಂದ್ಯ ಸಾಕಷ್ಟು ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟುಹಾಕಿದೆ ಎಂದು ಹೇಳಬಹುದು.

1
50848

ಟಾಸ್ ವರದಿ:

ದುಬೈ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದಾರೆ.

ಆಡುವ ಬಳಗಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ ( ನಾಯಕ ), ದೇವದತ್ ಪಡಿಕ್ಕಲ್, ಶ್ರೀಕರ್ ಭಾರತ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಎಬಿ ಡಿವಿಲಿಯರ್ಸ್, ಡೇನಿಯಲ್ ಕ್ರಿಶ್ಚಿಯನ್, ಜಾರ್ಜ್ ಗಾರ್ಟನ್, ಶಹಬಾಜ್ ಅಹಮದ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಾಹಲ್

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ ( ನಾಯಕ ಮತ್ತು ವಿಕೆಟ್ ಕೀಪರ್ ), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರರ್, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಕ್ರಿಸ್ ಮೋರಿಸ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ ಮತ್ತು ಮುಸ್ತಫಿಜುರ್ ರಹಮಾನ್

Live score:

1
50848

ಎರಡೂ ತಂಡಗಳ ಆಡುವ ಬಳಗದಲ್ಲಿ ಆಗಿರುವ ಬದಲಾವಣೆಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ಇಂದು ನಡೆಯುತ್ತಿರುವ ಪಂದ್ಯಕ್ಕೆ ಪ್ರಕಟವಾಗಿರುವ ಎರಡೂ ತಂಡಗಳ ಆಡುವ ಬಳಗದಲ್ಲಿ ತಲಾ ಒಂದು ಪ್ರಮುಖ ಬದಲಾವಣೆಯಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಜಾರ್ಜ್ ಗಾರ್ಟನ್ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದು, ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲಿ ಐಪಿಎಲ್ ಪದಾರ್ಪಣೆ ಮಾಡಲಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕೈಲ್ ಜೆಮಿಸನ್ ಅವರನ್ನು ಆಡುವ ಬಳಗದಿಂದ ಕೈಬಿಡಲಾಗಿದ್ದು, ಅವರ ಸ್ಥಾನಕ್ಕೆ ಈ ಬಾರಿಯ ಐಪಿಎಲ್ ಟೂರ್ನಿಯ ದ್ವಿತೀಯ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೇರಿರುವ ಜಾರ್ಜ್ ಗಾರ್ಟನ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡದ ಆಡುವ ಬಳಗದಿಂದ ಜಯದೇವ್ ಉನಾದ್ಕತ್ ಅವರನ್ನು ಕೈಬಿಡಲಾಗಿದ್ದು, ಜಯದೇವ್ ಉನಾದ್ಕತ್ ಬದಲಿಗೆ ಕಾರ್ತಿಕ್ ತ್ಯಾಗಿ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

Story first published: Wednesday, September 29, 2021, 19:20 [IST]
Other articles published on Sep 29, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+