CSK vs SRH: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 30ರ ಗುರುವಾರದಂದು ಸಂಜೆ 7.30ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಇನ್ನು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಮಾತ್ರ ಸೋಲುವುದರ ಮೂಲಕ 16 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದು, ಪ್ಲೇ ಆಫ್ ಹಂತಕ್ಕೆ ತನ್ನ ಪ್ರವೇಶವನ್ನು ಸುಗಮವಾಗಿಸಿಕೊಂಡಿದೆ. ಅತ್ತ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಕಳಪೆ ಪ್ರದರ್ಶನ ನೀಡಿರುವ ತಂಡ ಎನಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಬರೋಬ್ಬರಿ 8 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಹೀಗೆ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮತ್ತು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನ ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಐಪಿಎಲ್ ಇತಿಹಾಸದಲ್ಲಿ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಹೆಚ್ಚು ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ ಎಂಬುದರ ವಿವರ ಈ ಕೆಳಕಂಡಂತಿದೆ ನೋಡಿ..
ಒಟ್ಟಾರೆ ಐಪಿಎಲ್ ಪಂದ್ಯಗಳಲ್ಲಿ ಯಾರದ್ದು ಮೇಲುಗೈ?
ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 16 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯಗಳ ಪೈಕಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 12 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ಕೇವಲ 4 ಪಂದ್ಯಗಳಲ್ಲಿ ಗೆದ್ದಿದೆ. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದ ಒಟ್ಟಾರೆ ಮುಖಾಮುಖಿ ಪಂದ್ಯಗಳಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ದೊಡ್ಡ ಮಟ್ಟದ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳಲ್ಲಿ ಯಾರದ್ದು ಮೇಲುಗೈ?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯವನ್ನು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ 2 ಪಂದ್ಯಗಳನ್ನು ಗೆದ್ದಿದೆ. ಹೀಗೆ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆ ಸಾಧಿಸಿದೆ.
ಶಾರ್ಜಾ ಕ್ರೀಡಾಂಗಣದಲ್ಲಿ ಯಾರು ಬಲಿಷ್ಠರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಶಾರ್ಜಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು, ಆ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವನ್ನು ಸಾಧಿಸಿದೆ.
ಐಪಿಎಲ್ 2021 ಮೊದಲಾರ್ಧದಲ್ಲಿ ಗೆದ್ದವರಾರು?
ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಿದ್ದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications