ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021: ಸನ್‌ರೈಸರ್ಸ್‌ಗೆ ಇಂದು ಸೂಪರ್ ಕಿಂಗ್ಸ್‌ ಸವಾಲು: ಸಂಭಾವ್ಯ ಆಡುವ ಬಳಗ

IPL 2021, match 44, CSK vs SRH, preview and probable XI

ಶಾರ್ಜಾ, ಸೆಪ್ಟೆಂಬರ್ 30: ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವಿನ ಓಟವನ್ನು ಮುಂದುವರಿಸುವ ಹುಮ್ಮಸ್ಸಿನಲ್ಲಿದ್ದು ಈಗಾಗಲೇ ಅಂಕಪಟ್ಟಿಯಲ್ಲಿ ನಂಬರ್ 1 ತಂಡವಾಗಿರುವ ಧೋನಿ ಬಳಗ ಕೊನೆಯ ತಂಡವಾಗಿರುವ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೆಣೆಸಾಡಲಿದೆ. ಈಗಾಗಲೇ ಪ್ಲೇಆಫ್ ಸ್ಪರ್ಧೆಯಿಂದ ಹೊರಬಿದ್ದಿರುವ ಹೈದರಾಬಾದ್ ಚೆನ್ನೈಗೆ ಯಾವ ರೀತಿಯ ಸವಾಲು ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಪಂದ್ಯಕ್ಕೆ ಶಾರ್ಜಾ ಕ್ರೀಡಾಂಗಣ ಸಾಕ್ಷಿಯಾಗಲಿದೆ. ಗೆಲುವಿನ ಲಯದಲ್ಲಿರುವ ಚೆನ್ನೈ ಈ ಪಂದ್ಯದ ಗೆಲ್ಲುವ ನೆಚ್ಚಿನ ತಂಡ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ.

ಇನ್ನು ಪ್ಲೇಆಫ್‌ಗೆ ಟಿಕೆಟ್ ಖಚಿತಪಡಿಸಿಕೊಂಡಿರುವ ಚೆನ್ನೈ ಈ ಪಂದ್ಯದಲ್ಲಿ ಪ್ರಯೋಗಗಳನ್ನು ಮಾಡಲಿದೆಯಾ ಎಂಬುದು ಕೂಡ ಪ್ರಶ್ನೆಯಾಗಿದೆ. ಕೆಲ ಪ್ರಮುಖ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಬಾರದಿರುವ ಹಿನ್ನೆಲೆಯಲ್ಲು ಬೇರೆ ಆಟಗಾರರಿಗೆ ಅವಕಾಶ ನೀಡುತ್ತಾರಾ ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಟಿ20 ಕ್ರಿಕೆಟ್‌ನಲ್ಲಿ 7000 ರನ್ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳ ಪಟ್ಟಿಟಿ20 ಕ್ರಿಕೆಟ್‌ನಲ್ಲಿ 7000 ರನ್ ಬಾರಿಸಿದ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್‌ಗಳ ಪಟ್ಟಿ

ಇನ್ನು ಉತ್ತಮ ಫಾರ್ಮ್‌ನಲ್ಲಿರುವ ಆರಂಭಿಕ ಆಟಗಾರರಾದ ಋತುರಾಜ್ ಗಾಯಕ್ವಾಡ್ ಹಾಗೂ ಫಾಪ್ ಡು ಪ್ಲೆಸಿಸ್ ಆರಂಭಿಕರಾಗಿ ಮುಂದುವರಿಯಲಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಮೊಯೀನ್ ಅಲಿ ಒಂದೆರಡು ವೈಫಲ್ಯದ ಹೊರತಾಗಿಯೂ ತಮ್ಮ ಸ್ಥಾನ ಉಳಿಸಿಕೊಳ್ಳಲಿದ್ದಾರೆ. ಆದರೆ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಿರುವ ಅಂಬಾಟಿ ರಾಯುಡು ಹಾಗೂ ಸುರೇಶ್ ರೈನಾ ಅವರ ಸ್ಥಾನಗಳು ಬದಲಾದರೂ ಅಚ್ಚರಿಯಿಲ್ಲ.

ಇನ್ನು ಧೋನಿ ಹಾಗೂ ಜಡೇಜಾ ಆರು ಹಾಗೂ ಏಳನೇ ಕ್ರಮಾಂಕದಲ್ಲಿ ಕಣ್ಕಕಿಳಿಯಲಿದ್ದಾರೆ. ಇನ್ನು ಸ್ಯಾಮ್ ಕರನ್ ಸ್ಥಾನಕ್ಕೆ ಡ್ವೇಯ್ನ್ ಬ್ರಾವೋ ಮರಳುವ ಸಾಧ್ಯತೆಯಿದೆ. ಇನ್ನು ಆಡುವ ಬಳಗದಲ್ಲಿ ವೇಗಿಗಳಾಗಿ ಶರ್ದೂಲ್ ಠಾಕೂರ್, ದೀಪಕ್ ಚಾಹರ್ ಮತ್ತ ಜೋಶ್ ಹ್ಯಾಜಲ್‌ವುಡ್ ತಂಡದಲ್ಲಿ ಸ್ಥಾನವನ್ನು ಪಡೆಯಲಿದ್ದಾರೆ. ಈ ಮೂವರು ಕೂಡ ಉತ್ತಮ ಪ್ರದರ್ಶನ ನಿಡುತ್ತಿದ್ದು ಈ ವೇಗಿಗಳನ್ನು ಬದಲಾಯಿಒಸುವ ಸಾಧ್ಯತೆಯಿಲ್ಲ.

ಐಪಿಎಲ್ 2021: ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್ಐಪಿಎಲ್ 2021: ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಬರೆದ ಗ್ಲೆನ್ ಮ್ಯಾಕ್ಸ್‌ವೆಲ್

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಭಾವ್ಯ ತಂಡ: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಾಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರನ್/ ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್

ಸನ್‌ರೈಸರ್ಸ್ ಸ್ವಾಡ್: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಸಂದೀಪ್ ಶರ್ಮಾ, ಡೇವಿಡ್ ವಾರ್ನರ್, ಶ್ರೀವತ್ಸ್ ಗೋಸ್ವಾಮಿ, ಮನೀಶ್ ಪಾಂಡೆ, ಕೇದಾರ್ ಜಾಧವ್ , ಮೊಹಮ್ಮದ್ ನಬಿ, ಶಹಬಾಜ್ ನದೀಮ್, ವಿಜಯ್ ಶಂಕರ್, ವಿರಾಟ್ ಸಿಂಗ್, ಬೆಸಿಲ್ ಥಂಪಿ, ಜಗದೀಶ ಸುಚಿತ್, ಖಲೀಲ್ ಅಹ್ಮದ್, ಮುಜೀಬ್ ಉರ್ ರೆಹಮಾನ್, ಶೆರ್ಫೇನ್ ರುದರ್‌ಫೋರ್ಡ್, ಉಮ್ರಾನ್ ಮಲಿಕ್

ಐಪಿಎಲ್ 2021: ಆರ್‌ಸಿಬಿ ಪರ ಹೊಸ ದಾಖಲೆ ಬರೆದ ಹರ್ಷಲ್ ಪಟೇಲ್ಐಪಿಎಲ್ 2021: ಆರ್‌ಸಿಬಿ ಪರ ಹೊಸ ದಾಖಲೆ ಬರೆದ ಹರ್ಷಲ್ ಪಟೇಲ್

ಚೆನ್ನೈ ಸೂಪರ್ ಕಿಂಗ್ಸ್ ಸ್ಕ್ವಾಡ್: ಋತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಜೋಶ್ ಹ್ಯಾಜಲ್‌ವುಡ್, ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಚೇತೇಶ್ವರ ಪೂಜಾರ, ಕರ್ನ್ ಶರ್ಮಾ, ಇಮ್ರಾನ್ ತಾಹಿರ್, ಜೇಸನ್ ಬೆಹ್ರೆಂಡೋರ್ಫ್, ಕೃಷ್ಣಪ್ಪ ಗೌತಮ್, ಲುಂಗಿ ಎನ್ಗಿಡಿ, ಮಿಚೆಲ್ ಸ್ಯಾಂಟ್ನರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಹರಿ ನಿಶಾಂತ್, ಎನ್ ಜಗದೀಶನ್, ಕೆಎಂ ಆಸಿಫ್, ಹರಿಶಂಕರ್ ರೆಡ್ಡಿ, ಭಗತ್ ವರ್ಮ

Story first published: Thursday, September 30, 2021, 15:42 [IST]
Other articles published on Sep 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X