For Quick Alerts
ALLOW NOTIFICATIONS  
For Daily Alerts
 

CSK vs SRH: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 44, CSK vs SRH Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಸೆಪ್ಟೆಂಬರ್ 30ರ ಗುರುವಾರದಂದು ಸಂಜೆ 7.30ಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಮಾತ್ರ ಸೋಲುವುದರ ಮೂಲಕ 16 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದು, ಪ್ಲೇ ಆಫ್ ಹಂತಕ್ಕೆ ತನ್ನ ಪ್ರವೇಶವನ್ನು ಸುಗಮವಾಗಿಸಿಕೊಂಡಿದೆ. ಅತ್ತ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಕಳಪೆ ಪ್ರದರ್ಶನ ನೀಡಿರುವ ತಂಡ ಎನಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಬರೋಬ್ಬರಿ 8 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.

ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ತನ್ನ ಕಳೆದ ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಜಯವನ್ನು ಸಾಧಿಸಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ಕಳೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆದ್ದು ಬೀಗಿದೆ.

ಹೀಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯ 44ನೇ ಪಂದ್ಯದಲ್ಲಿ ಸೆಣಸಾಡಲಿದ್ದು ಈ ಪಂದ್ಯದ ಕುರಿತ ಮಾಹಿತಿ ಈ ಕೆಳಕಂಡಂತಿದೆ ಓದಿ..

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 44ನೇ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಸೆಪ್ಟೆಂಬರ್ 30ರ ಗುರುವಾರದಂದು ಶಾರ್ಜಾ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್‌ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.

ನೇರಪ್ರಸಾರದ ಮಾಹಿತಿ:

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

1
50849

ಸಂಭಾವ್ಯ ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ (ನಾಯಕ & ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್

ಸನ್ ರೈಸರ್ಸ್ ಹೈದರಾಬಾದ್ ಸಂಭಾವ್ಯ ತಂಡ: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಪ್ರಿಯಾಮ್ ಗಾರ್ಗ್, ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಂದೀಪ್ ಶರ್ಮಾ, ಸಿದ್ದಾರ್ಥ್ ಕೌಲ್

Story first published: Thursday, September 30, 2021, 17:57 [IST]
Other articles published on Sep 30, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+