ಐಪಿಎಲ್ 2021, CSK vs SRH: ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸದ್ಯ ಯುಎಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 44ನೇ ಪಂದ್ಯ ಇಂದು ( ಸೆಪ್ಟೆಂಬರ್ 30 ) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.
ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿದ್ದು 8 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಮಾತ್ರ ಸೋಲುವುದರ ಮೂಲಕ 16 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿದ್ದು, ಪ್ಲೇ ಆಫ್ ಹಂತಕ್ಕೆ ತನ್ನ ಪ್ರವೇಶವನ್ನು ಸುಗಮವಾಗಿಸಿಕೊಂಡಿದೆ. ಅತ್ತ ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಅತಿ ಕಳಪೆ ಪ್ರದರ್ಶನ ನೀಡಿರುವ ತಂಡ ಎನಿಸಿಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ಟೂರ್ನಿಯಲ್ಲಿ ಇದುವರೆಗೂ 10 ಪಂದ್ಯಗಳನ್ನಾಡಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆದ್ದು, ಬರೋಬ್ಬರಿ 8 ಪಂದ್ಯಗಳಲ್ಲಿ ಸೋತು 4 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನದಲ್ಲಿದೆ.
ಹೀಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಇಂದು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿರುವ ಸನ್ ರೈಸರ್ಸ್ ಹೈದರಾಬಾದ್ ತಂಡದ ಸವಾಲನ್ನು ಒಡ್ಡುತ್ತಿದ್ದು ಪಂದ್ಯದ ಟಾಸ್ ವರದಿ ಮತ್ತು ಆಡುವ ಬಳಗಗಳ ಮಾಹಿತಿ ಈ ಕೆಳಕಂಡಂತಿದೆ ಓದಿ.
ಟಾಸ್ ವರದಿ:
ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.
ಆಡುವ ಬಳಗಗಳು:
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಮ್ ಗಾರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್ ಮತ್ತು ಸಂದೀಪ್ ಶರ್ಮಾ.
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಅಂಬಟಿ ರಾಯುಡು, ಸುರೇಶ್ ರೈನಾ, ಎಂಎಸ್ ಧೋನಿ ( ನಾಯಕ ಮತ್ತು ವಿಕೆಟ್ ಕೀಪರ್ ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್ ಮತ್ತು ಜೋಶ್ ಹೇಜಲ್‌ವುಡ್
CSK vs SRH live score:
ಪಿಚ್ ವರದಿ:
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಈ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಪಿಚ್ ಬ್ಯಾಟ್ಸ್‌ಮನ್‌ಗಳ ಸ್ವರ್ಗ ಎಂದೇ ಹೇಳಬಹುದು. ಬೌಂಡರಿ ಲೈನ್ ಕೂಡ ಹತ್ತಿರದಲ್ಲಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಬೌಂಡರಿ, ಸಿಕ್ಸ್ ಮತ್ತು ರನ್ ಸಿಡಿಸಲು ಸಹಕಾರಿಯಾಗಲಿದೆ. ಇನ್ನು ಈ ಪಿಚ್‌ನಲ್ಲಿ ಬೌಲರ್‌ಗಳು ತುಸು ಹೆಚ್ಚಿನ ಶ್ರಮವಹಿಸಿ ಬೌಲಿಂಗ್ ಮಾಡಬೇಕಾದ ಅಗತ್ಯತೆಯಿದೆ, ಬೌಲರ್‌ಗಳಿಗೆ ವಿಕೆಟ್ ಬೀಳುವುದು ಕಷ್ಟಕರವಾಗಿರಲಿದೆ, ಅದರಲ್ಲೂ ವೇಗಿಗಳಿಗೆ ಈ ಪಿಚ್ ಹೆಚ್ಚಾಗಿ ಕಾಡಲಿದೆ.
ನೇರಪ್ರಸಾರದ ಮಾಹಿತಿ:
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications