For Quick Alerts
ALLOW NOTIFICATIONS  
For Daily Alerts
 

KKR vs PBKS: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 45, KKR vs PBKS Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಅಕ್ಟೋಬರ್ 1ರ ಶುಕ್ರವಾರದಂದು ಸಂಜೆ 7.30ಕ್ಕೆ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಯುಎಇ ಚರಣದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಪ್ಲೇ ಆಫ್ ಹಂತ ಪ್ರವೇಶಿಸುವ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ಪಂದ್ಯಗಳಲ್ಲಿ ಸೋತು, 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಅತ್ತ ಪ್ಲೇ ಆಫ್ ಹಂತ ಪ್ರವೇಶಿಸುವ ಹಾದಿಯಿಂದ ಬಹುತೇಕ ಹೊರಬಿದ್ದಿರುವ ಪಂಜಾಬ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಜಯ ಗಳಿಸಿದ್ದು, 7 ಪಂದ್ಯಗಳಲ್ಲಿ ಸೋಲುವುದರ ಮೂಲಕ 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಇಂದು (ಅಕ್ಟೋಬರ್ 1 ) ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವನ್ನು ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಪ್ರವೇಶದ ಹಾದಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಹೀಗಾಗಿ ಇಂದು ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿರುವುದು ನಿಜ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಯುಎಇಯಲ್ಲಿ ಆರಂಭವಾಗಿದ್ದು ಅಕ್ಟೋಬರ್ 1ರ ಶುಕ್ರವಾರದಂದು ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಟ ನಡೆಸಲಿವೆ. ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸಂಜೆ 7.30ಕ್ಕೆ ಈ ಪಂದ್ಯ ಆರಂಭವಾಗಲಿದ್ದು, ಇದು ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 45ನೇ ಪಂದ್ಯವಾಗಿದೆ.

ಪಿಚ್‌ ವರದಿ:

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

ನೇರಪ್ರಸಾರದ ಮಾಹಿತಿ:

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಕೊಲ್ಕತ್ತಾ ನೈಟ್ ರೈಡರ್ಸ್ ಸಂಭಾವ್ಯ ತಂಡ: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುನೀಲ್ ನರೈನ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಸಂದೀಪ್ ವಾರಿಯರ್, ವರುಣ್ ಚಕ್ರವರ್ತಿ

ಪಂಜಾಬ್ ಕಿಂಗ್ಸ್ ಸಂಭಾವ್ಯ ತಂಡ: ಕೆಎಲ್ ರಾಹುಲ್ (ನಾಯಕ ಮತ್ತು ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್/ಮನ್ ದೀಪ್ ಸಿಂಗ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ದೀಪಕ್ ಹೂಡಾ, ಹರಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

Story first published: Friday, October 1, 2021, 16:53 [IST]
Other articles published on Oct 1, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+