ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021, KKR vs PBKS: ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

IPL 2021, Match 44: KKR vs PBKS, Toss Report, Live Score and playing XI

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಯು. ಎ. ಇಯಲ್ಲಿ ನಡೆಯುತ್ತಿದ್ದು, ಟೂರ್ನಿಯ 45ನೇ ಪಂದ್ಯ ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಕೆಎಲ್ ರಾಹುಲ್ ನೇತೃತ್ವದ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಅಕ್ಟೋಬರ್ 1ರ ಶುಕ್ರವಾರದಂದು ದುಬೈ ನಗರದ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಕಳೆದ ಐಪಿಎಲ್‌ಗಿಂತ ಈ ಬಾರಿಯ ಐಪಿಎಲ್ ಕಳೆಗುಂದಿದೆ ಎಂದವರಿಗೆ ಅಂಕಿಅಂಶದ ಚಾಟಿ ಬೀಸಿದ ಬಿಸಿಸಿಐಕಳೆದ ಐಪಿಎಲ್‌ಗಿಂತ ಈ ಬಾರಿಯ ಐಪಿಎಲ್ ಕಳೆಗುಂದಿದೆ ಎಂದವರಿಗೆ ಅಂಕಿಅಂಶದ ಚಾಟಿ ಬೀಸಿದ ಬಿಸಿಸಿಐ

ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮೊದಲಾರ್ಧದಲ್ಲಿ ಕಳಪೆ ಪ್ರದರ್ಶನ ನೀಡಿ ಮಂಕಾಗಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಯುಎಇ ಚರಣದಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಪ್ಲೇ ಆಫ್ ಹಂತ ಪ್ರವೇಶಿಸುವ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಜಯ ಗಳಿಸಿರುವ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 6 ಪಂದ್ಯಗಳಲ್ಲಿ ಸೋತು, 10 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಅತ್ತ ಪ್ಲೇ ಆಫ್ ಹಂತ ಪ್ರವೇಶಿಸುವ ಹಾದಿಯಿಂದ ಬಹುತೇಕ ಹೊರಬಿದ್ದಿರುವ ಪಂಜಾಬ್ ಕಿಂಗ್ಸ್ ತಂಡ ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿ 4 ಪಂದ್ಯಗಳಲ್ಲಿ ಜಯ ಗಳಿಸಿದ್ದು, 7 ಪಂದ್ಯಗಳಲ್ಲಿ ಸೋಲುವುದರ ಮೂಲಕ 8 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ.

ಹೀಗೆ ಇಂದು (ಅಕ್ಟೋಬರ್ 1 ) ನಡೆಯಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವನ್ನು ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಪ್ರವೇಶದ ಹಾದಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಯೋಜನೆಯಲ್ಲಿದೆ. ಹೀಗಾಗಿ ಇಂದು ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲವನ್ನು ಹುಟ್ಟು ಹಾಕಿದೆ.

ಟಾಸ್ ವಿವರ: ಇಂದು ದುಬೈ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

1
50850

ಆಡುವ ಬಳಗಗಳು

ಪಂಜಾಬ್ ಕಿಂಗ್ಸ್ ಆಡುವ ಬಳಗ: ಕೆಎಲ್ ರಾಹುಲ್ (ನಾಯಕ/ ವಿಕೆಟ್ ಕೀಪರ್‌), ಮಯಾಂಕ್ ಅಗರ್ವಾಲ್, ಐಡೆನ್ ಮಾರ್ಕ್ರಮ್, ನಿಕೋಲಸ್ ಪೂರನ್, ಶಾರುಖ್ ಖಾನ್, ದೀಪಕ್ ಹೂಡಾ, ಫ್ಯಾಬಿಯನ್ ಅಲೆನ್, ನಾಥನ್ ಎಲ್ಲಿಸ್, ಮೊಹಮ್ಮದ್ ಶಮಿ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್

ಕೋಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಶುಬ್ಮನ್ ಗಿಲ್, ವೆಂಕಟೇಶ್ ಐಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಟಿಮ್ ಸೀಫರ್ಟ್, ಸುನಿಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ವರುಣ್ ಚಕ್ರವರ್ತಿ

KKR vs PBKS live score:

1
50850

ನೇರಪ್ರಸಾರದ ಮಾಹಿತಿ:

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಪಿಚ್‌ ವರದಿ:

ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಸಹಕಾರಿಯಾಗಿರಲಿದೆ. ಎರಡೂ ಇನ್ನಿಂಗ್ಸ್‌‌ನ ಬ್ಯಾಟಿಂಗ್‌ಗೂ ಈ ಪಿಚ್ ಸಹಕಾರಿಯಾಗಲಿದ್ದು ವೇಗಿಗಳಿಗೆ ಹೆಚ್ಚು ವಿಕೆಟ್ ಬೀಳುವ ಸಾಧ್ಯತೆಗಳು ಹೆಚ್ಚಿವೆ. ಹಾಗೂ ಈ ಪಿಚ್‌ನಲ್ಲಿ ಸ್ಪಿನ್ ಬೌಲರ್‌ಗಳ ಆಟ ಹೆಚ್ಚೇನೂ ನಡೆಯುವುದಿಲ್ಲ ಎಂಬ ವರದಿಯಿದ್ದು ಸ್ಪಿನ್ ಬೌಲರ್‌ಗಳು ವಿಕೆಟ್ ಪಡೆಯಲು ಹೆಚ್ಚಿನ ಶ್ರಮ ವಹಿಸಬೇಕಿದೆ.

Story first published: Friday, October 1, 2021, 19:14 [IST]
Other articles published on Oct 1, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X