MI vs DC: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಆರಂಭವಾಗಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಅಕ್ಟೋಬರ್ 2ರ ಶನಿವಾರದಂದು ಮಧ್ಯಾಹ್ನ 3.30ಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.
ಯುಎಇಯಲ್ಲಿ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಹಂತ ಪ್ರಾರಂಭವಾದ ಬಳಿಕ ಮುಂಬೈ ಇಂಡಿಯನ್ಸ್ ತಂಡ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿದ್ದು ಕೇವಲ ಒಂದೇ ಒಂದು ಪಂದ್ಯದಲ್ಲಿ ಮಾತ್ರ ಜಯಗಳಿಸಿದೆ. ಹ್ಯಾಟ್ರಿಕ್ ಸೋಲನ್ನು ಕಂಡು ಮಂಕಾಗಿದ್ದ ಮುಂಬೈ ಇಂಡಿಯನ್ಸ್ ತಂಡ ಇತ್ತೀಚೆಗಷ್ಟೇ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸುವುದರ ಮೂಲಕ ಪ್ಲೇಆಫ್ ಸುತ್ತನ್ನು ಪ್ರವೇಶಿಸುವ ತನ್ನ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಇನ್ನು ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿರುವ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡದ 8 ಪಂದ್ಯಗಳಲ್ಲಿ ಜಯಗಳಿಸಿ 16 ಅಂಕ ಪಡೆದು ಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದ್ದು ಪ್ಲೇ ಆಫ್ ಸುತ್ತಿಗೆ ಬಹುತೇಕ ಅರ್ಹತೆ ಪಡೆದುಕೊಂಡಿದ್ದು, ಅಧಿಕೃತವಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲು ಇನ್ನೊಂದು ಪಂದ್ಯವನ್ನು ಗೆಲ್ಲಲೇಬೇಕಾಗಿದೆ.
ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಇತ್ತಂಡಗಳಿಗೂ ಅತಿಮುಖ್ಯವಾದ ಪಂದ್ಯವಾಗಿದ್ದು, ಐಪಿಎಲ್ ಇತಿಹಾಸದಲ್ಲಿ ಎರಡೂ ತಂಡಗಳ ನಡುವೆ ನಡೆದಿರುವ ಪಂದ್ಯಗಳ ಪೈಕಿ ಯಾವ ತಂಡ ಎಷ್ಟು ಪಂದ್ಯದಲ್ಲಿ ಗೆದ್ದು ಮುನ್ನಡೆಯನ್ನು ಸಾಧಿಸಿದೆ ಎಂಬ ವಿವರ ಈ ಕೆಳಕಂಡಂತಿದೆ ನೋಡಿ.
ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇತಿಹಾಸದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳೆರಡೂ ಒಟ್ಟು 29 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಮುಂಬೈ ಇಂಡಿಯನ್ಸ್ ತಂಡ 16 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಹೀಗೆ ಐಪಿಎಲ್ ಇತಿಹಾಸದ ಒಟ್ಟಾರೆ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಮೇಲುಗೈ ಸಾಧಿಸಿದೆ.
ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಕೊನೆಯ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ 4 ಪಂದ್ಯದಲ್ಲಿ ಜಯಗಳಿಸಿದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೇವಲ 1 ಪಂದ್ಯದಲ್ಲಿ ಮಾತ್ರ ಜಯ ಸಾಧಿಸಿದೆ. ಈ ಮೂಲಕ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲಿ ಮುಂಬೈ ಇಂಡಿಯನ್ಸ್ ತಂಡ ಸ್ಪಷ್ಟ ಮೇಲುಗೈ ಸಾಧಿಸಿದೆ.
ಶಾರ್ಜಾ ಕ್ರೀಡಾಂಗಣದಲ್ಲಿ ಯಾರು ಬಲಿಷ್ಠರು?
ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವನ್ನು ಸಾಧಿಸಿದೆ.
ಪ್ರಸಕ್ತ ಸಾಲಿನ ಟೂರ್ನಿಯ ಫಲಿತಾಂಶ
ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ನಡೆದ ಇತ್ತಂಡಗಳ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲುವನ್ನು ಸಾಧಿಸಿದ್ದಾರೆ ಮುಂಬೈ ಇಂಡಿಯನ್ಸ್ ತಂಡ ಸೋಲನ್ನುಂಡಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications