For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2021, MI vs DC: ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

IPL 2021, Match 46: MI vs DC, Toss Report, Live Score and playing XI

ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದ್ದು ಯಾವ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿವೆ ಎನ್ನುವುದರ ಕುರಿತು ಚರ್ಚೆಗಳು ಮತ್ತು ಲೆಕ್ಕಾಚಾರಗಳು ಆರಂಭವಾಗಿವೆ. ಟೂರ್ನಿಯಲ್ಲಿ ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿದ್ದು, ಉಳಿದ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಅಕ್ಟೋಬರ್ 1ರಂದು ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಜಯ ಸಾಧಿಸಿದ ನಂತರ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಧಿಕೃತವಾಗಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ, ಇನ್ನು ಟೂರ್ನಿಯಲ್ಲಿ ಇದುವರೆಗೂ ಒಟ್ಟು 11 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, 6 ಪಂದ್ಯಗಳಲ್ಲಿ ಸೋಲುವುದರ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆರನೇ ಸ್ಥಾನ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡ ತನ್ನ ಉಳಿದ ಎಲ್ಲಾ 3 ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿದರೆ ಮಾತ್ರ ಯಶಸ್ವಿಯಾಗಿ ಪ್ಲೇ ಆಫ್ ಹಂತವನ್ನು ಪ್ರವೇಶಿಸಲಿದೆ. ಹೀಗಾಗಿ ಇಂದಿನ ಪಂದ್ಯ ಮುಂಬೈ ಇಂಡಿಯನ್ಸ್ ತಂಡಕ್ಕೆ ಅತಿಮುಖ್ಯವಾದ ಪಂದ್ಯವಾಗಿದ್ದು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಜಯ ಸಾಧಿಸುವುದರ ಮೂಲಕ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಇಂದು ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ಟಾಸ್ ವರದಿ ಮತ್ತು ಆಡುವ ಬಳಗಗಳ ಮಾಹಿತಿ ಈ ಕೆಳಕಂಡಂತಿದೆ..

ಟಾಸ್ ವರದಿ:

ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.

1
50851

ಆಡುವ ಬಳಗಗಳ ಮಾಹಿತಿ:

ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪೃಥ್ವಿ ಶಾ, ಶಿಖರ್ ಧವನ್, ಸ್ಟೀವನ್ ಸ್ಮಿತ್, ಶ್ರೇಯಸ್ ಐಯ್ಯರ್, ರಿಷಭ್ ಪಂತ್ ( ನಾಯಕ / ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೇಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೋ ರಬಾಡಾ, ಅವೇಶ್ ಖಾನ್ ಮತ್ತು ಅನ್ರಿಕ್ ನಾರ್ಕಿಯಾ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್

MI vs DC live score:

1
50851

Story first published: Saturday, October 2, 2021, 15:13 [IST]
Other articles published on Oct 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+