CSK vs RR: ಮುಖಾಮುಖಿ ಪಂದ್ಯಗಳಲ್ಲಿ ಬಲಿಷ್ಠ ತಂಡ ಯಾವುದು?

ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಸದ್ಯ ಯುಎಇಯಲ್ಲಿ ಮುಂದುವರಿಯುತ್ತಿದ್ದು ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆವೃತ್ತಿಯಲ್ಲಿ ಮಂಕಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಈ ಬಾರಿ ಭರ್ಜರಿ ಪ್ರದರ್ಶನ ನೀಡುವುದರ ಮೂಲಕ ಕಮ್ ಬ್ಯಾಕ್ ಮಾಡಿದೆ. ಇನ್ನು ಅಕ್ಟೋಬರ್ 2ರ ಶನಿವಾರದಂದು ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸೆಣಸಾಡಲಿದೆ.
ಒಂದೆಡೆ ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇ ಆಫ್ ಹಂತಕ್ಕೆ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲಗ್ಗೆ ಇಟ್ಟಿದೆ. ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.
ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸುವುದರ ಮೂಲಕ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ಯೋಜನೆಯಲ್ಲಿದ್ದು ಈ ಎರಡೂ ತಂಡಗಳು ಐಪಿಎಲ್ ಇತಿಹಾಸದಲ್ಲಿ ಮುಖಾಮುಖಿಯಾಗಿರುವ ಪಂದ್ಯಗಳಲ್ಲಿ ಯಾವ ತಂಡ ಎಷ್ಟು ಪಂದ್ಯದಲ್ಲಿ ಗೆದ್ದು ಮೇಲುಗೈ ಸಾಧಿಸಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ ನೋಡಿ.
ಒಟ್ಟಾರೆ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಐಪಿಎಲ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 25 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ತಂಡ 10 ಪಂದ್ಯಗಳಲ್ಲಿ ಗೆಲುವನ್ನು ದಾಖಲಿಸಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಒಟ್ಟಾರೆ ಮುಖಾಮುಖಿ ಪಂದ್ಯಗಳಲ್ಲಿ ಸ್ಪಷ್ಟ ಮೇಲುಗೈ ಸಾಧಿಸಿದರು.
ಕೊನೆಯ 5 ಪಂದ್ಯಗಳಲ್ಲಿ ಯಾರು ಬಲಿಷ್ಠರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಕೊನೆಯ 5 ಪದ್ಯಗಳಲ್ಲಿ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಪಂದ್ಯಗಳಲ್ಲಿ ಜಯವನ್ನು ಸಾಧಿಸಿದ್ದರೆ ಉಳಿದೆರಡು ಪಂದ್ಯಗಳಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಗೆದ್ದಿದೆ. ಈ ಮೂಲಕ ಕಳೆದ 5 ಪಂದ್ಯಗಳ ಮುಖಾಮುಖಿಯಲ್ಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುನ್ನಡೆ ಸಾಧಿಸಿದೆ.
ಅಬುದಾಬಿಯಲ್ಲಿ ಗೆದ್ದಿರುವವರಾರು?
ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳೆರಡೂ ಪಂದ್ಯವೊಂದರಲ್ಲಿ ಮುಖಾಮುಖಿಯಾಗಿದ್ದು ಈ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೋಲುಣಿಸಿದೆ.
ಪ್ರಸಕ್ತ ಸಾಲಿನ ಟೂರ್ನಿಯ ಮೊದಲ ಪಂದ್ಯದಲ್ಲಿ ಗೆದ್ದವರಾರು?
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಗೆಲುವನ್ನು ಸಾಧಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications