For Quick Alerts
ALLOW NOTIFICATIONS  
For Daily Alerts
 

CSK vs RR: ಸಂಭಾವ್ಯ ತಂಡಗಳು, ಪಂದ್ಯದ ಮಾಹಿತಿ, ಪಿಚ್ ವರದಿ ಹಾಗೂ ನೇರಪ್ರಸಾರದ ಮಾಹಿತಿ

IPL 2021, Match 47, CSK vs RR Preview, Pitch Report, Playing XIs, Live streaming

ಇದೇ ವರ್ಷದ ಏಪ್ರಿಲ್ ತಿಂಗಳಿನಲ್ಲಿ ಭಾರತದ ನೆಲದಲ್ಲಿ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು 29 ಲೀಗ್ ಹಂತದ ಪಂದ್ಯಗಳು ಮುಗಿಯುವವರೆಗೂ ಯಾವುದೇ ಅಡಚಣೆ ಇಲ್ಲದೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕೂಡಲೇ ಎಚ್ಚೆತ್ತುಕೊಂಡ ಬಿಸಿಸಿಐ ತಾತ್ಕಾಲಿಕವಾಗಿ ಟೂರ್ನಿಯನ್ನು ಸ್ಥಗಿತಗೊಳಿಸಿ ಮುಂದೂಡಿತ್ತು.

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗ ಸೆಪ್ಟೆಂಬರ್ 19ರ ಭಾನುವಾರದಿಂದ ಯುಎಇಯಲ್ಲಿ ಪುನಾರಂಭವಾಗಿದೆ. ಹೀಗೆ ಯುಎಇಯಲ್ಲಿ ಮುಂದುವರಿಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದಲ್ಲಿ ಅಕ್ಟೋಬರ್ 2ರ ಶನಿವಾರದಂದು ಸಂಜೆ 7.30ಕ್ಕೆ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಸೆಣಸಾಡಲಿವೆ.

ಇನ್ನು ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇ ಆಫ್ ಹಂತಕ್ಕೆ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲಗ್ಗೆ ಇಟ್ಟಿದೆ. ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.

ಹೀಗಾಗಿ ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲುವನ್ನು ಸಾಧಿಸುವುದರ ಮೂಲಕ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುವ ಯೋಜನೆಯಲ್ಲಿದ್ದು ಈ ಪಂದ್ಯದ ಕುರಿತಾದ ಪಿಚ್ ವರದಿ, ನೇರಪ್ರಸಾರದ ಮಾಹಿತಿ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಈ ಕೆಳಕಂಡಂತಿದೆ.

ಪಂದ್ಯದ ವಿವರ:

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 47ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಅಕ್ಟೋಬರ್ 2ರ ಶನಿವಾರದಂದು ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ.

ಪಿಚ್ ವರದಿ:

ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯ ಅಬುಧಾಬಿಯ ಶೈಖ್ ಜಾಯೆದ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ಹೆಚ್ಚು ಉಪಕಾರಿಯಾಗಿರಲಿದೆ ಮತ್ತು ಸ್ಪಿನ್ ಬೌಲರ್‌ಗಳಿಗಿಂತ ವೇಗಿಗಳಿಗೆ ಈ ಪಿಚ್ ಹೆಚ್ಚು ಸಹಕಾರಿಯಾಗಿರಲಿದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಆಯ್ದುಕೊಂಡ ತಂಡದ ಸರಾಸರಿ ಮೊತ್ತ 182 ರನ್ ಇದೆ.

ನೇರಪ್ರಸಾರದ ಮಾಹಿತಿ:

ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಈ ಪಂದ್ಯ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ನೇರ ಪ್ರಸಾರವಾಗಲಿದ್ದು, ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿಯೂ ಪಂದ್ಯದ ಲೈವ್ ವೀಕ್ಷಿಸಬಹುದಾಗಿದೆ. ಜೊತೆಗೆ ನಮ್ಮ ಮೈಖೇಲ್ ಕನ್ನಡ ವೆಬ್‌ಸೈಟ್‌ನಲ್ಲಿಯೂ ಪಂದ್ಯದ ಲೈವ್ ಸ್ಕೋರ್ ಅಪ್ ಡೇಟ್ ಇರಲಿದ್ದು ಲೈವ್ ಸ್ಕೋರ್ ತಿಳಿಯಲು ನೀವು ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಸಂಭಾವ್ಯ ತಂಡಗಳು:

ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ತಂಡ: ಫಾಫ್ ಡು ಪ್ಲೆಸಿಸ್, ರುತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ನಾಯಕ/ ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್

ರಾಜಸ್ಥಾನ್ ರಾಯಲ್ಸ್ ಸಂಭಾವ್ಯ ತಂಡ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಮಹಿಪಾಲ್ ಲೊಮ್ರರ್, ರಾಹುಲ್ ತೆವಟಿಯಾ, ರಿಯಾನ್ ಪರಾಗ್, ಕ್ರಿಸ್ ಮೋರಿಸ್, ಮುಸ್ತಫಿಜುರ್ ರೆಹಮಾನ್, ಕಾರ್ತಿಕ್ ತ್ಯಾಗಿ, ಚೇತನ್ ಸಕಾರಿಯಾ

Story first published: Saturday, October 2, 2021, 16:06 [IST]
Other articles published on Oct 2, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+