ಐಪಿಎಲ್ 2021, CSK vs RR: ಟಾಸ್ ವರದಿ, ಲೈವ್ ಸ್ಕೋರ್, ಪ್ಲೇಯಿಂಗ್ XI

ಯುಎಇಯಲ್ಲಿ ನಡೆಯುತ್ತಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದ್ದು ಯಾವ ತಂಡಗಳು ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಳ್ಳಲಿವೆ ಎನ್ನುವುದರ ಕುರಿತು ಚರ್ಚೆಗಳು ಮತ್ತು ಲೆಕ್ಕಾಚಾರಗಳು ಆರಂಭವಾಗಿವೆ. ಟೂರ್ನಿಯಲ್ಲಿ ಈಗಾಗಲೇ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಅಧಿಕೃತವಾಗಿ ಪ್ಲೇ ಆಫ್ ಸುತ್ತಿಗೆ ಪ್ರವೇಶವನ್ನು ಪಡೆದುಕೊಂಡಿದ್ದು, ಉಳಿದ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.
ಹೌದು, ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅಧಿಕೃತವಾಗಿ ಪ್ಲೇ ಆಫ್ ಹಂತಕ್ಕೆ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಲಗ್ಗೆ ಇಟ್ಟಿದೆ. ಟೂರ್ನಿಯಲ್ಲಿ ಇದುವರೆಗೂ 11 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 9 ಪಂದ್ಯಗಳಲ್ಲಿ ಜಯ ಗಳಿಸುವುದರ ಮೂಲಕ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಅತ್ತ ಟೂರ್ನಿಯಲ್ಲಿ 11 ಪಂದ್ಯಗಳನ್ನಾಡಿ ಕೇವಲ 4 ಪಂದ್ಯಗಳಲ್ಲಿ ಮಾತ್ರ ಜಯ ಗಳಿಸಿರುವ ರಾಜಸ್ಥಾನ್ ರಾಯಲ್ಸ್ ತಂಡ 8 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು ಪ್ಲೇ ಆಫ್ ರೇಸ್‌ನಿಂದ ಬಹುತೇಕ ಹೊರಬಿದ್ದಿದೆ.
ಹೀಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಇಂದು ಸೆಣಸಾಟ ನಡೆಸಲಿದ್ದು ಈ ಪಂದ್ಯದ ಟಾಸ್ ವರದಿ ಮತ್ತು ಆಡುವ ಬಳಗಗಳ ಮಾಹಿತಿ ಈ ಕೆಳಕಂಡಂತಿದೆ..
ಟಾಸ್ ವರದಿ:
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ತಂಡವಾದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ ( ವಿಕೆಟ್ ಕೀಪರ್ / ನಾಯಕ), ರವೀಂದ್ರ ಜಡೇಜಾ, ಸ್ಯಾಮ್ ಕರನ್, ಶಾರ್ದೂಲ್ ಠಾಕೂರ್, ಕೆಎಂ ಆಸಿಫ್, ಜೋಶ್ ಹೇಜಲ್‌ವುಡ್
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಎವಿನ್ ಲೂಯಿಸ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್/ನಾಯಕ), ಶಿವಂ ದುಬೆ, ಗ್ಲೆನ್ ಫಿಲಿಪ್ಸ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಆಕಾಶ್ ಸಿಂಗ್, ಮಯಾಂಕ್ ಮಾರ್ಕಂಡೆ, ಚೇತನ್ ಸಕಾರಿಯಾ, ಮುಸ್ತಫಿಜರ್ ರಹಮಾನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications